ದಿ. ರಾಜು ತಾಳಿಕೋಟಿಯವರ ಅಂತಿಮ ದರ್ಶನ

0
Spread the love

ವಿಜಯಸಾಕ್ಷಿ ಸುದ್ದಿ, ಧಾರವಾಡ: ರಂಗಭೂಮಿ ಕಲಾವಿದ, ಧಾರವಾಡ ರಂಗಾಯಣ ನಿರ್ದೇಶಕರಾಗಿದ್ದ ರಾಜು ತಾಳಿಕೋಟಿ ಅವರ ಪಾರ್ಥಿವ ಶರೀರಕ್ಕೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ಜ್ಯೋತಿ ಪಾಟೀಲ, ಜಿಲ್ಲಾಧಿಕಾರಿ ದಿವ್ಯ ಪ್ರಭು ಮತ್ತು ಸಿಇಒ ಭುವನೇಶ ಪಾಟೀಲ ಅವರು ಪುಷ್ಪಾರ್ಚನೆ ಮಾಡಿ, ಅಂತಿಮ ನಮನ ಸಲ್ಲಿಸಿದರು.

Advertisement

ಮಂಗಳವಾರ ಬೆಳಿಗ್ಗೆ ನಗರದ ರಂಗಾಯಣದಲ್ಲಿ ದಿ. ರಾಜು ತಾಳಿಕೋಟಿ ಅವರ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ರಂಗಭೂಮಿ ಕಲಾವಿದರು, ಅಭಿಮಾನಿಗಳು ಹಾಗೂ ಸಾಂಸ್ಕೃತಿಕ ಕ್ಷೇತ್ರದ ಅನೇಕ ಗಣ್ಯರು, ಸಾರ್ವಜನಿಕರು ದಿ. ರಾಜು ತಾಳಿಕೋಟಿ ಅವರಿಗೆ ಅಂತಿಮ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಧಾರವಾಡದ ವಿವಿಧ ರಾಷ್ಟ್ರೀಯ ಟ್ರಸ್ಟ್‌ಗಳ ಅಧ್ಯಕ್ಷರು, ಸದಸ್ಯರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬೆಳಗಾವಿ ವಿಭಾಗದ ಜಂಟಿ ನಿರ್ದೇಶಕ ಕೆ.ಎಚ್. ಚನ್ನೂರ, ಧಾರವಾಡ ರಂಗಾಯಣದ ಆಡಳಿತಾಧಿಕಾರಿ ಶಶಿಕಲಾ ಹುಡೇದ, ತಹಸೀಲ್ದಾರ ಡಾ. ಡಿ.ಎಚ್. ಹೂಗಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ರಂಗಾಯಣದ ಎಲ್ಲ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here