ವಿಜಯಸಾಕ್ಷಿ ಸುದ್ದಿ, ಹರಪನಹಳ್ಳಿ : ತಾಲೂಕಿನಲ್ಲಿ ಹಲವು ದಿನಗಳಿಂದ ಜೋರಾಗಿ ಸುರಿಯುತ್ತಿರುವ ಮಳೆಯಿಂದಾಗಿ, ಅರಸೀಕೆರೆ ಗ್ರಾಮದ ಹೃದಯ ಭಾಗದಲ್ಲಿರುವ ಚಿಕ್ಕ ಕೆರೆಯು ಸಂಪೂರ್ಣ ತುಂಬುವ ಹಂತಕ್ಕೆ ಬಂದಿದೆ. ದೊಡ್ಡ ಕೆರೆಗೆ ನೀರಿನ ಒಳ ಹರಿವು ಹೆಚ್ಚುತ್ತಿದ್ದು, ಮುಂಗಾರಿನಲ್ಲೇ ಎರಡು ಕೆರೆಗಳಿಗೆ ನೀರು ಬಂದಿರುವುದು ಸಾರ್ವಜನಿಕರಲ್ಲಿ ಮಂದಹಾಸ ಮೂಡಿಸಿದೆ.
Advertisement
ಮಂಗಳವಾರ ಸುರಿದ ಭಾರೀ ಮಳೆಯಿಂದಾಗಿ ಅರಸೀಕೆರೆ ಹೋಬಳಿಯ ಅಣಜೀಗೆರೆ, ಮಾದಿಹಳ್ಳಿ, ಉಚ್ಚಂಗಿದುರ್ಗ, ತುಂಬಿಗೆರೆ ಸೇರಿದಂತೆ ಹಲವು ಕಡೆ ನರೇಗಾ ಯೋಜನೆ ಅಡಿಯಲ್ಲಿ ನಿರ್ಮಿಸಿರುವ ಗೋಕಟ್ಟೆಗಳು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ.
ಅರಸೀಕೆರೆ ರೈತ ಸಂಪರ್ಕ ಕಛೇರಿಗೆ ನೀರು ನುಗ್ಗಿದ ಪರಿಣಾಮ, ಬಿತ್ತನೆ ಬೀಜ ಹಾಗೂ ಗೊಬ್ಬರ ವಿತರಣೆಯನ್ನು ಕೆಲ ಸಮಯ ಸ್ಥಗಿತಗೊಳಿಸಲಾಗಿತ್ತು. ಕೋಲಶಾಂತೇಶ್ವರ ಮಠದ ಆವರಣವು ಸಂಪೂರ್ಣ ಜಲಾವೃತಗೊಂಡಿತ್ತು.