ಕಲಬುರ್ಗಿ:- ಜಿಲ್ಲೆಯ ಚಿಂಚೊಳ್ಳಿ ತಾಲೂಕಿನ ಮಿರಿಯಾಣದ ಸರ್ಕಾರಿ ಆಸ್ಪತ್ರೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿ 16 ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜರುಗಿದೆ.
Advertisement
ಮಿರಿಯಾಣದಿಂದ ತಾಂಡೂರ್ ಕಡೆ ಹೊರಟಿದ್ದ ಲಾರಿ ಅಪಘಾತಕ್ಕೀಡಾಗಿದ್ದು, ಸ್ಥಳಕ್ಕೆ ಮಿರಿಯಾಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಚಾಲಕ ಕೃಷ್ಣ ಪಾನಮತ್ತನಾಗಿ ಲಾರಿ ಚಲಾಯಿಸುತ್ತಿದ್ದ ಹಿನ್ನೆಲೆಯಲ್ಲಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.
ಗಾಯಾಳುಗಳನ್ನು ಕಲಬುರಗಿ ಹಾಗೂ ಬೀದರ್ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು
ತಿಳಿದು ಬಂದಿದೆ.