ಬಿಹಾರ:- ಬಿಹಾರದ ಮುಂಗೇರ್ ಜಿಲ್ಲೆಯಲ್ಲಿ ವ್ಯಕ್ತಿಯೋರ್ವ 8 ವರ್ಷದ ಬಾಲಕನ ಹಣೆಗೆ ಗುಂಡು ಹಾರಿಸಿರುವ ಘಟನೆ ಜರುಗಿದೆ.
ಅಂಗಡಿಯಿಂದ ಸಿಗರೇಟ್ ತರಲು ನಿರಾಕರಿಸಿದ್ದಕ್ಕೆ ವ್ಯಕ್ತಿ ಈ ಕೃತ್ಯ ಎಸಗಿದ್ದಾನೆ. ಬಾಲಕ ವಿಪರೀತ ಚಳಿ ಎಂದು ಮನೆಯ ಹೊರಗಡೆ ಬೆಂಕಿ ಹಾಕಿಕೊಂಡು ಅದರ ಮುಂದೆ ಕುಳಿತಿದ್ದ, ಆಗ ಅದೇ ಊರಿನ ನಿತೀಶ್ ಕುಮಾರ್ ಬಾಲಕ ಬಳಿ ಬಂದು ತುಂಬಾ ಅಂಗಡಿಯಿಂದ ಸಿಗರೇಟ್ ತೆಗೆದುಕೊಂಡು ಬಾ ಎಂದು ಹೇಳಿದ್ದಾನೆ.
ತುಂಬಾ ಚಳಿ ಇದೆ ನನಗೆ ಹೋಗಲು ಸಾಧ್ಯವಿಲ್ಲ ಎಂದು ಬಾಲಕ ಹೇಳಿದ್ದಾನೆ. ಅದಕ್ಕೆ ಕೋಪಗೊಂಡ ನಿತೀಶ್ ಕುಮಾರ್ ಪಿಸ್ತೂಲ್ ಹೊರ ತೆಗೆದು ಹುಡುಗನ ಹಣೆಗೆ ಗುಂಡು ಹಾರಿಸಿದ್ದಾನೆ. ಗುಂಡಿನ ಸದ್ದು ಕೇಳಿ ಕುಟುಂಬಸ್ಥರು ಮತ್ತು ನೆರೆಹೊರೆಯವರು ಸ್ಥಳಕ್ಕೆ ಧಾವಿಸಿ ನೋಡಿದಾಗ ಬಾಲಕ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಬಂದಿದೆ.
ಗ್ರಾಮಸ್ಥರ ಸಹಾಯದಿಂದ ಧರಹರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು. ಅಲ್ಲಿನ ವೈದ್ಯರು ಅವರನ್ನು ಉನ್ನತ ಚಿಕಿತ್ಸೆಗಾಗಿ ಮುಂಗೇರ್ ಸದರ್ ಆಸ್ಪತ್ರೆಗೆ ಕಳುಹಿಸಿದ್ದಾರೆ. ಆತನ ಸ್ಥಿತಿ ಗಂಭೀರವಾಗಿದ್ದು, ನಂತರ ಉನ್ನತ ವೈದ್ಯಕೀಯ ಸೌಲಭ್ಯಕ್ಕಾಗಿ ಬೇರೆಡೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.