HomeGadag Newsಶಾಲಾ ಕೊಠಡಿ ಉದ್ಘಾಟಿಸಿದ ಸಚಿವ ಡಾ. ಎಚ್.ಕೆ. ಪಾಟೀಲ

ಶಾಲಾ ಕೊಠಡಿ ಉದ್ಘಾಟಿಸಿದ ಸಚಿವ ಡಾ. ಎಚ್.ಕೆ. ಪಾಟೀಲ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ : ನಗರದ ಗಂಗಿಮಡಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆ, ಲೋಕೋಪಯೋಗಿ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ 2022-23ನೇ ಸಾಲಿನ ವಿವೇಕ ಯೋಜನೆಯಡಿ ನಿರ್ಮಿಸಲಾದ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಗಂಡು ಮಕ್ಕಳ ಶಾಲೆ ನಂ. 7ರ ನೂತನ 2 ಕೊಠಡಿಗಳನ್ನು ಬುಧವಾರ ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ರವಿ ಕಮತರ, ಕೆಡಿಪಿ ಸಮಿತಿಯ ಸದಸ್ಯರಾದ ಎಸ್.ಎನ್. ಬಳ್ಳಾರಿ, ಬಿ.ಬಿ. ಅಸೂಟಿ, ಅಶೋಕ ಮಂದಾಲಿ, ಎಸ್‌ಡಿಎಂಸಿ ಅಧ್ಯಕ್ಷ ರಿಯಾಜ್ ಅಹಮ್ಮದ್ ಗುಡಸಲಮನಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರಡಿ, ಬಿಇಒ ಮಂಗಳಾ ತಾಪಸ್ಕರ, ಶಾಲಾ ಮುಖ್ಯೋಪಾಧ್ಯಾಯೆ ಎಸ್.ಆರ್. ಚಾಹುಸೇನ್, ಬಿಆರ್‌ಪಿ ಪ್ರಕಾಶ ಮಂಗಳೂರು ಮುಂತಾದವರು ಹಾಜರಿದ್ದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img