ಕೋಲಾರ: ಕೋಲಾರ ನಗರದ ಆರ್ಟಿಒ ಕಚೇರಿ ಬಳಿ ಇರುವ ಜಡೆಮುನೇಶ್ವರಸ್ವಾಮಿ ದೇಗುಲದ ಮೂರ್ತಿಗಳನ್ನ ಕಿಡಿಗೇಡಿಗಳು ವಿರೂಪಗೊಳಿಸಿದ್ದಾರೆ. ಮೂರ್ತಿಗಳನ್ನ ವಿರೂಪಗೊಳಿಸಿರುವ ಕಿಡಿಗೇಡಿಯ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಮೂರ್ತಿಗಳನ್ನು ಧ್ವಂಸ ಮಾಡುತ್ತಿರುವ ದೃಶ್ಯ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Advertisement
ಹಿಂದೂಗಳ ಭಾವನೆಗೆ ಘಾಸಿ ಗೊಳಿಸಿರುವ ಹಾಗೂ ಪುರಾತನ ದೇವರ ವಿಗ್ರಹವನ್ನು ನಾಶಪಡಿಸಿರುವ ಈ ವ್ಯಕ್ತಿಯನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಕೋಲಾರ ನಗರ ಠಾಣಾ ಪೊಲೀಸರು ಭೇಟಿ, ಪರಿಶೀಲನೆ ನಡೆಸಿ ಈ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.