ಸೇವಾ ಕಾರ್ಯಗಳೇ ಸಂಸ್ಥೆಯ ಧ್ಯೇಯ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ನರಗುಂದದ ಲಯನ್ಸ್ ಕ್ಲಬ್‌ನ ಸುವರ್ಣ ಮಹೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮ ಪಟ್ಟಣದ ಬಸವೇಶ್ವರ ಸಮುದಾಯ ಭವನದಲ್ಲಿ ಮಾರ್ಚ್ 27ರಂದು ಸಾಯಂಕಾಲ 5 ಗಂಟೆಗೆ ನಡೆಯಲಿದೆ. `ಸಾರ್ಥಕ’ ಎನ್ನುವ ಶೀರ್ಷಿಕೆಯಡಿ ಈ ಕಾರ್ಯಕ್ರಮ ನಡೆಯಲಿದ್ದು, ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ನರಗುಂದ ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶಗೌಡ್ರ ಸಿ.ಪಾಟೀಲ ಹೇಳಿದರು.

Advertisement

ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನರಗುಂದದ ಲಯನ್ಸ್ ಕ್ಲಬ್ ತನ್ನ ಸುವರ್ಣ ಮಹೋತ್ಸವ ಆಚರಿಸುತ್ತಿದೆ. ಲಯನ್ಸ್ ಕ್ಲಬ್ ಅಂತಾರಾಷ್ಟ್ರೀಯ ಸಂಸ್ಥೆಯಾಗಿದ್ದು, ತನ್ನ ಸೇವಾ ಕಾರ್ಯಗಳ ಮೂಲಕ ಜನಮೆಚ್ಚುಗೆ ಗಳಿಸಿದೆ. ಜಗತ್ತಿನಾದ್ಯಂತ ಸುಮಾರು 200 ರಾಷ್ಟçಗಳಲ್ಲಿ ತನ್ನ ಶಾಖೆಗಳನ್ನು ಹೊಂದಿದ್ದು, 14 ಲಕ್ಷಕ್ಕೂ ಅಧಿಕ ಸದಸ್ಯರನ್ನು ಲಯನ್ಸ್ ಕ್ಲಬ್ ಹೊಂದಿದೆ ಎಂದರು.

ಲಯನ್ಸ್ ಕ್ಲಬ್ ಸೇವಾ ಕಾರ್ಯಗಳನ್ನು ತನ್ನ ಮುಖ್ಯ ಧ್ಯೇಯವಾಗಿ ಇರಿಸಿಕೊಂಡಿದೆ. ಭಾರತದಲ್ಲಿ 1956ರಲ್ಲಿ ಪ್ರಥಮ ಬಾರಿಗೆ ಮುಂಬೈನಲ್ಲಿ ಆರಂಭವಾಗಿ, 70 ವರ್ಷದಿಂದ ನಿರಂತರ ಸೇವೆ ಮಾಡುತ್ತಿದೆ. ದೇಶದಲ್ಲಿ 6,500 ಸಂಸ್ಥೆಯನ್ನು ಹೊಂದಿದೆ. ಏಪ್ರಿಲ್ 9 1976ರಲ್ಲಿ ನರಗುಂದದಲ್ಲಿ 29 ಸದಸ್ಯರನ್ನು ಒಳಗೊಂಡ ಸಂಸ್ಥೆ ಆರಂಭವಾಯಿತು. ಸ್ಥಾನಿಕವಾಗಿ ಹಾಗೂ ಸ್ಥಳೀಯ ಬೇಡಿಕೆಗಳಿಗೆ ತಕ್ಕಂತೆ ಸಂಸ್ಥೆಯು ಸೇವಾ ಕಾರ್ಯ ಮಾಡುತ್ತದೆ ಎಂದು ಉಮೇಶಗೌಡ್ರ ಹೇಳಿದರು.

ಪರಿಸರ ಸಂರಕ್ಷಣೆ, ಹಸಿವು ಮುಕ್ತ ಸಮಾಜ, ಅಂಧತ್ವ ನಿವಾರಣೆ, ಕ್ಯಾನ್ಸರ್ ತಪಾಸಣೆ, ಮಹಿಳೆಯರ ಆರೋಗ್ಯ ತಪಾಸಣೆ, ಶೈಕ್ಷಣಿಕ ಕಾರ್ಯಕ್ರಮ ಸೇರಿದಂತೆ ಹಲವಾರು ಸೇವಾ ಕಾರ್ಯಗಳನ್ನು ಮಾಡಿಕೊಂಡು ಬರಲಾಗಿದೆ. ನರಗುಂದದಲ್ಲಿ ಲಯನ್ಸ್ ಆಂಗ್ಲ ಮಾಧ್ಯಮ, ಕನ್ನಡ, ಸ್ವತಂತ್ರ ಪಿಯು ಕಾಲೇಜು ಸ್ಥಾಪನೆ ಮಾಡಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಸಿ.ಸಿ. ಪಾಟೀಲ, ದಿಕ್ಸೂಚಿ ಭಾಷಣಕಾರರಾಗಿ ಮಾಜಿ ಸಂಸದ ಬಸವರಾಜ ಪಾಟೀಲ ಸೇಡಂ, ಮನೋಜ ಮಾನೇಕರ, ಆನಂದ ಪೋತ್ನಿಸ್, ಎನ್.ಎಂ. ಬಿರಾದಾರ, ಡಾ. ಶ್ರೀಧರ್ ಕುರಡಗಿ, ಎಂ.ವಿ. ಮೇಟಿ ಸೇರಿದಂತೆ ಅನೇಕ ಗಣ್ಯರು ಆಗಮಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಎನ್.ವಿ. ಮೇಟಿ, ಕಮಲೇಶ್ ಸೂಲಿ, ಅಜ್ಜನಗೌಡ ಪಾಟೀಲ, ಸುನೀಲ ಶೆಲ್ಲಿಕೇರಿ, ಪ್ರಕಾಶ ಅಂಗಡಿ ಉಪಸ್ಥಿತರಿದ್ದರು.

ಕ್ರೀಡೆಗೆ ಪ್ರೋತ್ಸಾಹ ನೀಡಲು, ಗ್ರಾಮೀಣ ಭಾಗದ ಪ್ರತಿಭೆಗಳನ್ನು ಬೆಳೆಸುವ ಉದ್ದೇಶದಿಂದ ರಾಷ್ಟç ಮಟ್ಟದ ಕಬ್ಬಡ್ಡಿ ಪಂದ್ಯಾವಳಿ, ತಿರಂಗಾ ಯಾತ್ರೆ, ವಿದ್ಯಾರ್ಥಿಗಳಿಗೆ ಪರೀಕ್ಷಾ ಸಲಹೆಯಂತಹ ಮಹತ್ವದ ಕಾರ್ಯಕ್ರಮಗಳನ್ನು ನರಗುಂದ ಲಯನ್ಸ್ ಕ್ಲಬ್ ವತಿಯಿಂದ ಮಾಡಲಾಗಿದೆ. 50 ವರ್ಷಗಳಲ್ಲಿ ವಿಶೇಷ ಸೇವೆ ಮಾಡುವ ಮೂಲಕ ನರಗುಂದ ಲಯನ್ಸ್ ಕ್ಲಬ್ ವಿಶೇಷ ಮೈಲುಗಲ್ಲು ತಲುಪಿದ್ದು, ಮುಂದಿನ ದಿನಮಾನಗಳಲ್ಲಿ ಬೇಡಿಕೆಗೆ ತಕ್ಕಂತೆ ಇನ್ನೂ ಹೆಚ್ಚಿನ ಕಾರ್ಯಕ್ರಮಗಳನ್ನು ಮಾಡುತ್ತೇವೆ ಎಂದು ಉಮೇಶಗೌಡ್ರ ಸಿ.ಪಾಟೀಲ ಹೇಳಿದರು.


Spread the love

LEAVE A REPLY

Please enter your comment!
Please enter your name here