ಬೆಂಗಳೂರು: ರಾಜ್ಯದ ಮುಂಗಾರು ಅಧಿವೇಶನ ಆಗಸ್ಟ್ 11ರಿಂದ ಆಗಸ್ಟ್ 22ರವರೆಗೆ ನಡೆಯಲಿದ್ದು, ಒಟ್ಟು 9 ದಿನಗಳ ಅವಧಿಗೆ ಸಭೆಗಳು ನಡೆಯಲಿವೆ. ಈ ಕುರಿತು ರಾಜ್ಯ ಸರ್ಕಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ.ಅಧಿವೇಶನದ ಪ್ರಾರಂಭದ ದಿನವಾದ ಆಗಸ್ಟ್ 11 ರಂದು ಬೆಳಿಗ್ಗೆ 11 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ವಿಧಾನಸಭೆ ಹಾಗೂ ವಿಧಾನ ಪರಿಷತ್‌ನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ ಅಧಿವೇಶನಕ್ಕೆ ಚಾಲನೆ ನೀಡಲಿದ್ದಾರೆ.
ಈ ಕುರಿತಂತೆ ರಾಜ್ಯ ಸರ್ಕಾರದ ಸಂಸದೀಯ ವ್ಯವಹಾರಗಳ ಕಾರ್ಯದರ್ಶಿ ಜಿ.ಶ್ರೀಧರ್ ಅಧಿಸೂಚನೆ ಹೊರಡಿಸಿದ್ದು, ಭಾರತ ಸಂವಿಧಾನದ 174ನೇ ಅನುಚ್ಛೇದದ (1)ನೇ ಖಂಡದ ಮೂಲಕ ನನಗೆ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ ಥಾವರ್ ಚಂದ್ ಗೆಹ್ಲೋಟ್, ಕರ್ನಾಟಕ ರಾಜ್ಯಪಾಲರು ಆದ ನಾನು 2025ರ ಆಗಸ್ಟ್ 11ರಂದು ಸೋಮವಾರ ಬೆಳಗ್ಗೆ 11ಕ್ಕೆ ಬೆಂಗಳೂರಿನಲ್ಲಿ ಕರ್ನಾಟಕ ವಿಧಾನಮಂಡಲದ ಅಧಿವೇಶನ ಸಮಾವೇಶಗೊಳಿಸಬೇಕೆಂದು ಈ ಮೂಲಕ ಕರೆಯುತ್ತಿದ್ದೇನೆ ಎಂಬುದಾಗಿ ತಿಳಿಸಿದ್ದಾರೆ.
ಇನ್ನೂ ಕರ್ನಾಟಕ ವಿಧಾನಮಂಡಲದ ಅಧಿವೇಶನದ ತಾತ್ಕಾಲಿಕ ಕಾರ್ಯಕ್ರಮಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಆಗಸ್ಟ್ 11 ಸೋಮವಾರದಿಂದ 22-08-2025ರವರೆಗೆ ವಿಧಾನಮಂಡಲದ ಕಲಾಪಗಳು ನಡೆಯಲಿವೆ ಎಂದು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.
ವಿಧಾನಸಭೆಯ ತಾತ್ಕಾಲಿಕ ಕಾರ್ಯಕ್ರಮಗಳ ಪಟ್ಟಿ
- ಆ.11ರಂದು ಸರ್ಕಾರಿ ಕಾರ್ಯಕಲಾಪಗಳು
- ಆ.12ರಂದು ಸರ್ಕಾರಿ ಕಾರ್ಯಕಲಾಪಗಳು
- ಆ,13ರಂದು ಸರ್ಕಾರಿ ಕಾರ್ಯಕಲಾಪಗಳು
- ಆ.14ರಂದು ಖಾಸಗಿ-ಸರ್ಕಾರಿ ಕಾರ್ಯಕಲಾಪಗಳು
- ಆ.15ರಂದು ಸಾರ್ವತ್ರಿಕ ರಜಾದಿನ
- ಆ.16ರಂದು 2ನೇ ಶನಿವಾರ ಆಗಿರುವುದರಿಂದ ಸರ್ಕಾರಿ ಕಾರ್ಯಕಲಾಪಗಳು ಇರುವುದಿಲ್ಲ
- ಆ.17ರಂದು ಭಾನುವಾರ ಸಾರ್ವಜನಿಕ ರಜಾದಿನ
- ಆ.18ರಂದು ಸರ್ಕಾರಿ ಕಾರ್ಯಕಲಾಪಗಳು
- ಆ.19ರಂದು ಸರ್ಕಾರಿ ಕಾರ್ಯಕಲಾಪಗಳು
- ಆ.20ರಂದು ಸರ್ಕಾರಿ ಕಾರ್ಯಕಲಾಪಗಳು
- ಆ.21ರಂದು ಖಾಸಗಿ-ಸರ್ಕಾರಿ ಕಾರ್ಯಕಲಾಪಗಳು
- ಆ.22ರಂದು ಸರ್ಕಾರಿ ಕಾರ್ಯಕಲಾಪಗಳು