ಬೆಂಗಳೂರು: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು, ಪರಿಸರ ಹಿತೈಷಿಣಿ ಹಾಗೂ “ವೃಕ್ಷಮಾತೆ” ಎಂದು ಖ್ಯಾತರಾದ ಸಾಲುಮರದ ತಿಮ್ಮಕ್ಕ ಅವರು ಶುಕ್ರವಾರ ನಿಧನರಾಗಿದ್ದು, ಇಂದು ಬೆಂಗಳೂರಿನ ಜ್ಞಾನಭಾರತಿ ಕಲಾಗ್ರಾಮದಲ್ಲಿ ರಾಜ್ಯ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು.
114 ವರ್ಷ ವಯಸ್ಸಿನ ತಿಮ್ಮಕ್ಕ ಅವರ ಪಾರ್ಥಿವ ಶರೀರಕ್ಕೆ ಸಕಲ ಸರ್ಕಾರಿ ಗೌರವ ಸಲ್ಲಿಸಲಾಗಿದ್ದು, ಮೂರು ಸುತ್ತು ಕುಶಾಲತೋಪು ಹಾರಿಸುವ ಮೂಲಕ ಪೊಲೀಸರು ವಿಶೇಷ ಗೌರವ ಸೂಚಿಸಿದರು. ಜ್ಞಾನ ಭಾರತಿಯ ಕಲಾಗ್ರಾಮದ ಆವರಣದಲ್ಲಿ ಡಾ.ಸಿದ್ದಲಿಂಗಯ್ಯ ಅವರ ಸಮಾಧಿ ಪಕ್ಕದಲ್ಲೇ ತಿಮ್ಮಕ್ಕ ಅವರ ಅಂತ್ಯಕ್ರಿಯೆ ನಡೆದಿದೆ.
ಅವರ ದತ್ತು ಪುತ್ರ ಅಂತ್ಯಕ್ರಿಯೆ ವಿಧಿ ವಿಧಾನಗಳನ್ನ ನೆರವೇರಿಸಿದ್ದಾರೆ. ಕುಶಾಲ ತೋಪು ಸಿಡಿಸಿ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿಸಲಾಯ್ತು.ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೇರಿದಂತೆ ಹಲವು ಗಣ್ಯರು ವೃಕ್ಷಮಾತೆಗೆ ಅಂತಿಮ ಗೌರವ ಸಲ್ಲಿಸಿದರು.



