ಸೃಜನ್ ಲೋಕೇಶ್ ನಿರ್ದೇಶನದ ಬಹು ನಿರೀಕ್ಷಿತ “GST” ಚಿತ್ರ ನವೆಂಬರ್ 28ರಂದು ರಿಲೀಸ್

0
Spread the love

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನೀಡಿರುವ ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅವರು ಅರ್ಪಿಸುವ, ಸಂದೇಶ್ ಎನ್ ನಿರ್ಮಾಣದ ಹಾಗೂ ಸೃಜನ್ ಲೋಕೇಶ್ ನಾಯಕನಾಗಿ ನಟಿಸುವುದಲ್ಲದೆ, ಪ್ರಥಮ ಬಾರಿಗೆ ನಿರ್ದೇಶನವನ್ನು ಮಾಡಿರುವ “GST” ಚಿತ್ರ ಈ ವಾರ ನವೆಂಬರ್ 28 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. 

Advertisement

“GST”  ಚಿತ್ರ ಹಲವು ವಿಶೇಷತೆಗಳನ್ನೊಳಗೊಂಡಿದೆ. ಈ ಚಿತ್ರದಲ್ಲಿ ನಿರ್ಮಾಪಕ ಸಂದೇಶ್ ಅವರು  ಪ್ರಮುಖಪಾತ್ರದಲ್ಲಿ ನಟಸಿದ್ದಾರೆ. ಅವರ ಪಾತ್ರ ಏನೆಂಬುದ್ದನ್ನು ನಿರ್ದೇಶಕ ಸೃಜನ್ ಲೋಕೇಶ್ ಗುಪ್ತವಾಗಿಟ್ಟಿದ್ದಾರೆ. ಇನ್ನು ಈ ಚಿತ್ರದಲ್ಲಿ ಗಿರಿಜಾ ಲೋಕೇಶ್, ಸೃಜನ್ ಲೋಕೇಶ್ ಹಾಗೂ ಸೃಜನ್ ಅವರ ಪುತ್ರ ಸುಕೃತ್ ಮೂರು ಜನ ಅಭಿನಯಿಸಿದ್ದಾರೆ. ಅಜ್ಜಿ, ಮಗ ಹಾಗೂ ಮೊಮ್ಮಗ ಮೂರು ಜನರನ್ನು ಒಟ್ಟಿಗೆ ತೆರೆಯ ಮೇಲೆ ಈ ಚಿತ್ರದಲ್ಲಿ ನೋಡಬಹುದು. ತಮ್ಮ ನಿರ್ದೇಶನದ ಮೊದಲ ಚಿತ್ರದಲ್ಲೇ ಸೃಜನ್ ತಮ್ಮ ತಾಯಿ ಹಾಗೂ ಮಗನಿಗೆ ಆಕ್ಷನ್ ಕಟ್ ಹೇಳಿದ್ದಾರೆ.  ಮನೋರಂಜನೆಯೇ ಪ್ರಧಾನವಾಗಿರುವ  “GST” ಚಿತ್ರಕ್ಕೆ “ಘೋಸ್ಟ್ ಇನ್ ಟ್ರಬಲ್” ಎಂಬ ಅಡಿಬರಹವಿದೆ.

ಸೃಜನ್ ಲೋಕೇಶ್ ಅವರಿಗೆ ನಾಯಕಿಯಾಗಿ ರಜನಿ ಭಾರದ್ವಾಜ್ ನಟಿಸಿದ್ದಾರೆ.  ಪ್ರಮೋದ್ ಶೆಟ್ಟಿ, ಗಿರಿಜಾ ಲೋಕೇಶ್, ಶೋಭ್ ರಾಜ್, ಶರತ್ ಲೋಹಿತಾಶ್ವ, ನಿವೇದಿತಾ, ಅರವಿಂದ್ ರಾವ್, ತಬಲ ನಾಣಿ, ರವಿಶಂಕರ್ ಗೌಡ, ವಿನೋದ್ ಗೊಬ್ಬರಗಾಲ, ಮಾಸ್ಟರ್ ಸುಕೃತ್ ಮುಂತಾದವರು ಈ ಸಿನಿಮಾದ ತಾರಾಬಳಗದಲ್ಲಿದ್ದಾರೆ.

ಚಂದನ್ ಶೆಟ್ಟಿ ಸಂಗೀತ ನಿರ್ದೇಶನ ಹಾಗೂ  ಗುಂಡ್ಲುಪೇಟೆ ಸುರೇಶ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ರಾಜಶೇಖರ್ ಸಂಭಾಷಣೆ ಬರೆದಿದ್ದಾರೆ. ತೇಜಸ್ವಿ ಕೆ ನಾಗ್ ಈ ಚಿತ್ರದ ಸಹ ನಿರ್ದೇಶಕರು.


Spread the love

LEAVE A REPLY

Please enter your comment!
Please enter your name here