ರಾಮನಗರ: ರಾಮನಗರ ಹೊರವಲಯದ ಹಳ್ಳಿಮಾಳ ಸಮೀಪ ದರ್ಗಾಗೆ ಬಂದಿದ್ದ ಬಾಲಕ ನೀರಿನಲ್ಲಿ ಆಟವಾಡಲು ಹೋಗಿ ಅರ್ಕಾವತಿ ನದಿಯಲ್ಲಿ ಕೊಚ್ಚಿಹೋದ ಘಟನೆ ಜರುಗಿದೆ.
Advertisement
9 ವರ್ಷದ ಮೊಹಮ್ಮದ್ ಸೈಫ್ ನೀರಿನಲ್ಲಿ ಕೊಚ್ಚಿಹೋದ ಬಾಲಕ. ಅರ್ಕಾವತಿ ನದಿ ಪಕ್ಕದಲ್ಲಿರುವ ದರ್ಗಾಗೆ ಸೋಮವಾರ ಬೆಂಗಳೂರಿನ ಲಕ್ಕಸಂದ್ರದ ನಿವಾಸಿಗಳಾದ ರಿಯಾಜ್ ಮತ್ತು ಸಮೀಮ್ ಭಾನು ತಮ್ಮ ಪುತ್ರನ ಜೊತೆ ಬಂದಿದ್ದರು. ಈ ವೇಳೆ ನೀರಿನಲ್ಲಿ ಆಟವಾಡುತ್ತಿದ್ದ ಮೊಹಮ್ಮದ್ ಸೈಫ್ ಕಾಲುಜಾರಿ ನದಿಯಲ್ಲಿ ಕೊಚ್ಚಿಹೋಗಿದ್ದಾನೆ.
ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ ಬಾಲಕ ಪತ್ತೆಯಾಗದೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.