ರಾಜ್ಯದ ಜನರಿಗೆ ಕಾಂಗ್ರೆಸ್ ಕೊಟ್ಟ ಏಕೈಕ ಗ್ಯಾರಂಟಿ ಅಂದ್ರೆ ‘ಬೆಲೆ ಏರಿಕೆ’- ಬಿವೈ ವಿಜಯೇಂದ್ರ!

0
Spread the love

ಬೆಂಗಳೂರು:– ರಾಜ್ಯದ ಜನರಿಗೆ ಕಾಂಗ್ರೆಸ್ ಕೊಟ್ಟ ಏಕೈಕ ಗ್ಯಾರಂಟಿ ಅಂದ್ರೆ ‘ಬೆಲೆ ಏರಿಕೆ’ ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ.

Advertisement

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ದರಿದ್ರ, ಜನವಿರೋಧಿ, ಕೆಟ್ಟ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಈ ನಾಡಿನ ಜನತೆಗೆ ಕೊಟ್ಟ ಏಕೈಕ ಗ್ಯಾರಂಟಿ ಎಂದರೆ ಅದು ಬೆಲೆ ಏರಿಕೆ. ಬೆಲೆ ಏರಿಕೆಯಿಂದ ನಾಡಿನ ಸಾಮಾನ್ಯ ಜನರು, ಬಡವರು, ರೈತರು ಸೇರಿ ಎಲ್ಲರೂ ತತ್ತರಿಸಿ ಹೋಗಿದ್ದಾರೆ ಎಂದು ಕಿಡಿಕಾರಿದರು.

ಇವರ ಹುಳುಕನ್ನು ಮುಚ್ಚಿ ಹಾಕಲು ಪದೇಪದೇ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಒಂದು ಕಡೆ ಪುಕ್ಕಟೆ ವಿದ್ಯುತ್ ಎನ್ನುತ್ತಾರೆ. ರಾಜ್ಯದಲ್ಲಿ ರೈತರು ಸಂಕಷ್ಟದಲ್ಲಿದ್ದಾರೆ. 3 ಫೇಸ್ ವಿದ್ಯುತ್‌ನ್ನು 7 ಗಂಟೆ ಕೊಡಲು ಸರ್ಕಾರಕ್ಕೆ ಆಗುತ್ತಿಲ್ಲ. ಮತ್ತೊಂದು ಕಡೆ ಪಿಡಬ್ಲ್ಯೂಡಿ ಮತ್ತಿತರ ಇಲಾಖೆಗಳು 6,500 ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿವೆ. ಜನರಿಗೆ ಬರೆ ಎಳೆಯುವ ಸರ್ಕಾರದ ಕ್ರಮ ಅಕ್ಷಮ್ಯ ಅಪರಾಧ. ಇದನ್ನು ಸದನದಲ್ಲಿ ಪ್ರಸ್ತಾಪ ಮಾಡುತ್ತೇವೆ ಎಂದರು.


Spread the love

LEAVE A REPLY

Please enter your comment!
Please enter your name here