ಬೆಂಗಳೂರು: 4 ದಶಕಗಳ ಕಾಲ ಸದ್ದು ಮಾಡಿದ್ದ ನಕ್ಸಲ್ ಸಂಸ್ಕೃತಿಯಿಂದ ಕರ್ನಾಟಕ ಮುಕ್ತ ಆಗುವ ಮುನ್ಸೂಚನೆ ಸಿಕ್ಕಿದೆ. ಇತ್ತೀಚಿಗಷ್ಟೇ ಆರು ಮಂದಿ ನಕ್ಸಲ್ರು ಸಿಎಂ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದೆ ಶರಣಾಗಿದ್ದರು. ಇದರ ಬೆನ್ನಲ್ಲೇ ರಾಜ್ಯದ ಏಕೈಕ ನಕ್ಸಲ್ ಎನಿಸಿದ್ದ ರವೀಂದ್ರ ಕಾಡಿನಲ್ಲೇ ಉಳಿದಿದ್ದರು.
ಇವರು ನಕ್ಸಲ್ ಪುನರ್ವಸತಿ ಸಮಿತಿ ಹಾಗೂ ಶಾಂತಿಗಾಗಿ ನಾಗರೀಕರ ವೇದಿಕೆ ಮುಖಂಡರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಇದೀಗ ಎರಡೂ ಸಮಿತಿಗಳ ಮಾತುಕತೆ ನಂತರ ರವೀಂದ್ರ ಶಸ್ತ್ರಾಸ್ತ್ರ ತ್ಯಜಿಸಿ ಮುಖಯವಾಹಿನಿಗೆ ಮರಳಲು ಒಪ್ಪಿಕೊಂಡಿದ್ದಾರೆ.
ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದ ಕೋಟೆಹೊಂಡ ನಿವಾಸಿಯಾಗಿರುವ ರವೀಂದ್ರ ಕಳೆದ 18 ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು. ನಕ್ಸಲ್ರ ನಾಯಕ ವಿಕ್ರಮ್ ಗೌಡ ಎನ್ಕೌಂಟರ್ ಬಳಿಕ ರವೀಂದ್ರ ನಾಪತ್ತೆಯಾಗಿದ್ದರು. ರವೀಂದ್ರ ಶರಣಾಗತಿಗೆ ನಕ್ಸಲ್ ಶರಣಾಗತಿ ಕಮಿಟಿ ಹರಸಾಹಸ ಪಟ್ಟಿತ್ತು.
ಕೊನೆಗೂ ರಾಜ್ಯ ಸರ್ಕಾರದ ನಕ್ಸಲ್ ಶರಣಾಗತಿ ಪ್ಯಾಕೇಜ್ ಒಪ್ಪಿ ರವಿಂದ್ರ ಶರಣಾಗಿದ್ದಾರೆ. ನಕ್ಸಲ್ ರವೀಂದ್ರ ಒಟ್ಟು 26 ಪ್ರಕರಣಗಳಲ್ಲಿ ಬೇಕಾಗಿದ್ದಾರೆ. ನಕ್ಸಲ್ ರವೀಂದ್ರ ವಿರುದ್ಧ ಕರ್ನಾಟಕದಲ್ಲಿ 17, ಕೇರಳದಲ್ಲಿ 9 ಕೇಸ್ ದಾಖಲಾಗಿವೆ. ಚಿಕ್ಕಮಗಳೂರು ಜಿಲ್ಲೆಯೊಂದರಲ್ಲೇ 14 ಪ್ರಕರಣಗಳು ದಾಖಲಾಗಿವೆ.


