ಪಕ್ಷ ನನಗೆ ಸಂಘಟನೆ ಜವಾಬ್ದಾರಿ ಹಾಗೂ ಡಿಸಿಎಂ ಸ್ಥಾನ ನೀಡಿದ್ದು, ನನ್ನ ಗಮನ ಅವುಗಳತ್ತ ಮಾತ್ರ ಇದೆ: ಡಿ.ಕೆ. ಶಿವಕುಮಾರ್

0
Spread the love

ಬೆಂಗಳೂರು: ಪಕ್ಷ ನನಗೆ ಸಂಘಟನೆ ಹಾಗೂ ಡಿಸಿಎಂ ಹುದ್ದೆ ನೀಡಿದ್ದು, ನನ್ನ ಗಮನ ಪಕ್ಷ ಹಾಗೂ ಸರ್ಕಾರದ ಹಿತಾಸಕ್ತಿ ಕಾಪಾಡುವುದರತ್ತ ಮಾತ್ರ ಇದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.

Advertisement

ನಾಯಕತ್ವ ಬದಲಾವಣೆ ವಿಚಾರವಾಗಿ ಹೈಕಮಾಂಡ್ ಹೇಳುವ ಮುನ್ನ ಸಿದ್ದರಾಮಯ್ಯ ಅವರು ಹೇಳಿಕೆ ಕೊಟ್ಟಿರುವುದು ಎಷ್ಟು ಸರಿ ಎಂದು ಕೇಳಿದಾಗ, “ನೀವು ನನಗೆ ಹೇಗೆ ತಿರುಗಿಸಿ ಕೇಳಿದರೂ ನಾನಂತೂ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ನಿಮಗೆ ಬಲಿಯಾಗುವುದಿಲ್ಲ. ನಿಮ್ಮ ಪ್ರಶ್ನೆಗಳಲ್ಲೇ ಉತ್ತರವಿದೆ. ಪಕ್ಷ ಕೊಟ್ಟಿರುವ ಜವಾಬ್ದಾರಿ ಮುಂದುವರಿಸಿಕೊಂಡು ಹೋಗುತ್ತೇನೆ. ಮಲ್ಲಿಕಾರ್ಜುನ ಖರ್ಗೆ ಅವರು ನಮಗೆ ಧೀಕ್ಷೆ ನೀಡಿದ್ದು, ನಾವೆಲ್ಲರೂ ಅದನ್ನು ಸಂತೋಷವಾಗಿ ಸ್ವೀಕರಿಸಿದ್ದೇವೆ. ಇದರ ಹೊರತಾಗಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ” ಎಂದು ತಿಳಿಸಿದರು.

ಹೈಕಮಾಂಡ್ ಭೇಟಿಯಾಗಿ ಯಾವೆಲ್ಲಾ ರಾಜಕೀಯ ಚರ್ಚೆ ನಡೆಯಿತು ಎಂದು ಕೇಳಿದಾಗ, “ನಾವು ಸುರ್ಜೆವಾಲ ಅವರ ಹೊರತಾಗಿ ಬೇರೆ ಯಾವುದೇ ಹೈಕಮಾಂಡ್ ನಾಯಕರನ್ನು ಭೇಟಿಯಾಗಿಲ್ಲ. ರಾಜ್ಯ ಉಸ್ತುವಾರಿಗಳ ಜೊತೆ ನಮ್ಮ ಕಾರ್ಯಕರ್ತರಿಗೆ ಕೆಲವು ಸ್ಥಾನಮಾನ ನೀಡುವ ಬಗ್ಗೆ ಚರ್ಚೆ ಮಾಡಲಾಗಿದೆ. ಎಲ್ಲಾ ಶಾಸಕರು ತಮ್ಮ ಅಭಿಪ್ರಾಯ ಸಲ್ಲಿಸಿದ್ದಾರೆ. ಸಚಿವರ ಅಭಿಪ್ರಾಯ ಸಂಗ್ರಹಿಸಬೇಕಿದೆ.

ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಪಕ್ಷ ಸಂಘಟನೆ ವಿಚಾರದಲ್ಲಿ ಶ್ರಮಿಸಿರುವವರಿಗೆ ಹಾಗೂ ಕೆಲವರಿಗೆ ನಾವು ಕೊಟ್ಟಿರುವ ಮಾತಿಗೆ ಬದ್ಧವಾಗಿ ಸ್ಥಾನಮಾನ ನೀಡಬೇಕಿದೆ. ಈ ಪ್ರಕ್ರಿಯೆ ಈಗಾಗಲೇ ತಡವಾಗಿದೆ. ಇದು ಅಂತಿಮ ಹಂತಕ್ಕೆ ಬಂದಿದೆ. ಅಧ್ಯಕ್ಷನಾಗಿ ನಾನು ಪಕ್ಷದ ಸಂಘಟನೆಗೆ ಶ್ರಮಿಸಿದವರ ಹೆಸರನ್ನು ಸೇರಿಸಿ ಇದರ ಪ್ರಸ್ತಾವನೆಯನ್ನು ಮತ್ತೊಮ್ಮೆ ದೆಹಲಿಗೆ ಕಳುಹಿಸಿ ಅನುಮತಿ ಪಡೆಯಲಾಗುವುದು” ಎಂದರು.


Spread the love

LEAVE A REPLY

Please enter your comment!
Please enter your name here