ಕಳ್ಳತನ ಮಾಡಲು ಬಂದವ ಮನೆ ಒಡತಿಗೆ ಮುತ್ತು ಕೊಟ್ಟು ಎಸ್ಕೇಪ್ ಆದ!

0
Spread the love

ಮುಂಬೈ:- ಮನೆಯೊಂದಕ್ಕೆ ನುಗ್ಗಿದ ಕಳ್ಳನೊಬ್ಬ ಮನೆಯ ಒಡತಿಗೆ ಮುತ್ತು ಕೊಟ್ಟು ಪರಾರಿಯಾಗಿರುವ ಘಟನೆ ಮಹಾರಾಷ್ಟ್ರದ ಮುಂಬೈನ ಮಲಾಡ್ ಉಪನಗರದಲ್ಲಿ ಜರುಗಿದೆ.

Advertisement

ಕಳ್ಳನು ದರೋಡೆ ಮಾಡುವ ಉದ್ದೇಶದಿಂದ ಮನೆಗೆ ಪ್ರವೇಶಿಸಿದ್ದಾನೆ. ಆದರೆ, ಮನೆಯನ್ನೆಲ್ಲ ಹುಡುಕಾಡಿ ಯಾವುದೇ ಬೆಲೆಬಾಳುವ ವಸ್ತುಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ಕಳ್ಳ ಅನಿರೀಕ್ಷಿತ ಮನೆಯ ಒಡತಿಗೆ ಮುತ್ತು ನೀಡಿ, ಅಸಭ್ಯವಾಗಿ ವರ್ತಿಸಿ ಪರಾರಿಯಾಗಿದ್ದಾನೆ.

ಕಳ್ಳನು ತಪ್ಪಿಸಿಕೊಳ್ಳುವ ಮೊದಲು ಮನೆಯಲ್ಲಿದ್ದ ಮಹಿಳೆಯನ್ನು ಚುಂಬಿಸಿದ್ದಾನೆ ಎಂದು ವರದಿಯಾಗಿದೆ. ಸಂತ್ರಸ್ತೆ, ಆಘಾತಗೊಂಡು ಸುಧಾರಿಸಿಕೊಳ್ಳುವಷ್ಟರಲ್ಲಿ ಆತ ಪರಾರಿಯಾಗಿದ್ದಾನೆ. ಆಕೆ ತಕ್ಷಣವೇ ಪೊಲೀಸರನ್ನು ಸಂಪರ್ಕಿಸಿದ್ದಾರೆ. ಕೂಡಲೇ ಸ್ಪಂದಿಸಿದ ಅಧಿಕಾರಿಗಳು ಮಹಿಳೆಯ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೂಲಂಕುಷವಾಗಿ ತನಿಖೆ ನಡೆಸಿ ಸಾಕ್ಷ್ಯಾಧಾರಗಳನ್ನು ಕಲೆಹಾಕಿದ ಪೊಲೀಸರು ಕೆಲವೇ ದಿನಗಳಲ್ಲಿ ಆರೋಪಿಗಳನ್ನು ಗುರುತಿಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಅಸಾಮಾನ್ಯ ಘಟನೆ ಬಗ್ಗೆ ತನಿಖೆ ಮುಂದುವರಿದಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here