ಸರಿಯಾದ ಸಮಯಕ್ಕೆ ಆ್ಯಂಬುಲೆನ್ಸ್ ಬಾರದೇ ನೋವಿನಿಂದ ನರಳಾಡಿದ ವ್ಯಕ್ತಿ

0
Spread the love

ವಿಜಯನಗರ: ಸಮಯಕ್ಕೆ ಸರಿಯಾಗಿ ಆಂಬ್ಯುಲೆನ್ಸ್​ ಬಾರದ ಹಿನ್ನೆಲೆಯಲ್ಲಿ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ ನೋವಿನಿಂದ ನಡು ರಸ್ತೆಯಲ್ಲಿ ನರಳಾಡಿರುವ ಘಟನೆ ಕೂಟ್ಟೂರು ಪಟ್ಟಣದಲ್ಲಿ ನಡೆದಿದೆ. ಮನಕಲುಕುವ ದೃಶ್ಯಕ್ಕೆ ಕೂಟ್ಟೂರು ಪಟ್ಟಣ ಸಾಕ್ಷಿಯಾಗಿದೆ. ಬಸವರಾಜಪ್ಪ ಗಾಯಗೊಂಡ ವ್ಯಕ್ತಿಯಾಗಿದ್ದು, ಬಸವರಾಜಪ್ಪ ಅವರು ಇಂದು ಬೆಳಿಗ್ಗೆ ಕೊಟ್ಟೂರು ಬಸ್ ನಿಲ್ದಾಣ ಬಳಿ ಹೋಗುತ್ತಿದ್ದರು. ಈ ವೇಳೆ ಚಾಲಕನ ಅಜಾಗರೂಕತೆಯಿಂದ ಕೆಎಸ್​ಆರ್​ಟಿಸಿ ಬಸ್ ಬಸವರಾಜಪ್ಪ ಅವರಿಗೆ​ ಡಿಕ್ಕಿ ಹೊಡೆದಿದೆ.

Advertisement

ಇದರಿಂದ ಬಸವರಾಜಪ್ಪ ಅವರ ಎಡಗಾಲಿಗೆ ಗಂಭೀರ ಗಾಯವಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳಿಯರು ಆಂಬ್ಯುಲೆನ್ಸ್​ಗೆ ಕರೆ ಮಾಡಿದ್ದಾರೆ. ಆದರೆ ಎಷ್ಟು ಹೊತ್ತಾದರೂ ಆಂಬ್ಯುಲೆನ್ಸ್​ ಸ್ಥಳಕ್ಕೆ ಬರಲಿಲ್ಲ. ಹೀಗಾಗಿ ಗಾಯಗೊಂಡಿದ್ದ ಬಸವರಾಜಪ್ಪ ನಡು ರಸ್ತೆಯಲ್ಲಿ ನೋವಿನಿಂದ ನರಳಾಡಿದ್ದಾರೆ. ಕೊನೆಗೆ ಸ್ಥಳೀಯರು ಬಸ್‌ನಲ್ಲಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಸ್ ಚಾಲಕನ ವಿರುದ್ಧ ಕೂಟ್ಟೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here