ಬೆಳಗಾವಿ: ಪೊಲೀಸರೇ ಸಿವಿಲ್ ಡ್ರೆಸ್ ಧರಿಸಿ ಬಂದು ಹಲ್ಲೆ ಮಾಡಿದ್ದರು ಎಂದು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಆರೋಪ ಮಾಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಪೊಲೀಸರೇ ಸಿವಿಲ್ ಡ್ರೆಸ್ ಧರಿಸಿ ಬಂದು ಹಲ್ಲೆ ಮಾಡಿದ್ದರು. ದ್ವೇಷದಿಂದ ಕಲ್ಲು ಹೊಡೆಯುವ ಕೆಲಸವನ್ನು ಮಾಡಿದ್ದಾರೆ.
Advertisement
ಲಿಂಗಾಯತ ಸಮಾಜದ ಕೋಟ್ಯಂತರ ಜನ ಕಣ್ಣೀರಿಡುತ್ತಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಕ್ಷಮೆ ಕೇಳಬೇಕು. ಹಲ್ಲೆ ಮಾಡಿದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅವರನ್ನ ಅಮಾನತು ಮಾಡಬೇಕೆಂದು ಒತ್ತಾಯಿಸಿದ್ದಾರೆ.
ವಕೀಲರು, ಮಹಿಳಾ ಹೋರಾಟಗಾರರ ಮೇಲೂ ಹಲ್ಲೆಯಾಗಿದೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಹೀಗಾಗಿದ್ದಕ್ಕೆ ಬಹಳ ನೋವಾಯ್ತು. ದೊಡ್ಡ ಲಿಂಗಾಯತ ಸಮುದಾಯದ ಮೇಲೆ ದೌರ್ಜನ್ಯವಾಗಿದೆ. ದೌರ್ಜನ್ಯ ಮಾಡಿದ್ರೂ 2ಎ ಮೀಸಲಾತಿ ನಿಮಗೆ ಕೊಡಲು ಆಗಲ್ಲ ಅಂತಾ ಸಿಎಂ ಹೇಳಲಿ ಎಂದು ಕಿಡಿಕಾರಿದ್ದಾರೆ.