ಹುಬ್ಬಳ್ಳಿ:- ಗುಂಡಿನ ದಾಳಿಗೈದು ದರೋಡೆಕೋರನನ್ನು ಗೋಕುಲ ರೋಡ್ ಪೊಲೀಸರು ಸೆರೆ ಹಿಡಿದ ಘಟನೆ ಹುಬ್ಬಳ್ಳಿಯಲ್ಲಿ ಜರುಗಿದೆ.
Advertisement
ಮಹೇಶ್ ಸೀತಾರಾಮ್ ಕಾಳೆ ಬಂಧಿತ ವ್ಯಕ್ತಿ ಆಗಿದ್ದಾನೆ. ಇಂದು ಬೆಳಿಗ್ಗೆ ಮಹೇಶ್ ಮತ್ತು ಈತನ ಗ್ಯಾಂಗ್ ಮನೆ ಕಳ್ಳತನಕ್ಕೆ ಇಳಿದಿತ್ತು. ವಿಚಾರ ತಿಳಿದು ಕಾರ್ಯಾಚರಣೆಗೆ ಇಳಿದ ಪೊಲೀಸರು ಆರೋಪಿ ಮಹೇಶ್ ಸೀತಾರಾಮ್ನನ್ನು ಬಂಧಿಸುವಲ್ಲಿ ಯಶಸ್ವಿಯಾದರು. ಉಳಿದವರು ಪರಾರಿಯಾದರು.
ಉಳಿದ ಡಕಾಯಿತರು ಇರುವ ಜಾಗ ತೋರಿಸುತ್ತೇನೆ ಅಂತ ಮಹೇಶ್ ಪೊಲೀಸರನ್ನು ಕರೆದುಕೊಂಡು ಹೋಗಿದ್ದಾನೆ. ಡಕಾಯಿತರು ಇದ್ದ ಸ್ಥಳಕ್ಕೆ ಹೋದ ಬಳಿಕ ಮಹೇಶ್ ಪೊಲೀಸರ ಮೇಲೆಯೇ ಹಲ್ಲೆ ಮಾಡಲು ಮುಂದಾಗಿದ್ದಾನೆ.
ಪ್ರಾಣ ರಕ್ಷಣೆಗಾಗಿ ಗೋಕುಲ ರೋಡ್ ಪೊಲೀಸ್ ಠಾಣೆಯ ಪಿಎಸ್ಐ ಸಚಿನ ದಾಸರೆಡ್ಡಿ ಮಹೇಶ್ ಕಾಲಿಗೆ ಗುಂಡು ಹಾರಿಸಿದ್ದಾರೆ. ಗುಂಡು ತಿಂದು ನೋವಿನಿಂದ ಒದ್ದಾಡುತ್ತಿದ್ದ ಮಹೇಶ್ನನ್ನು ಹುಬ್ಬಳ್ಳಿ ಕಿಮ್ಸ್ಗೆ ದಾಖಲಿಸಲಾಗಿದೆ.
ಪೋಲಿಸ್ ಇಲಾಖೆಯ ಕಾರ್ಯ ಶ್ಲಾಘನೀಯ ಕಾನೂನಿ ಗೆ ಸೆಡ್ಡು ಹೊಡೆಯುವಂತಾ ಉದ್ಧಟತನ ತೋರುವಂತಾ ಸಮಾಜಘಾತುಕ ಶಕ್ತಿಗಳ ದಮನಕ್ಕೆ ನಿರ್ದಾಕ್ಷಿಣ್ಯ ಕ್ರಮ ಕೈ ಕೊಳ್ಳಲು ಸರ್ವ ರೀತಿಯ ಅಧಿಕಾರ ಇಲಾಖೆಗೆ ನೀಡಿ
ಬೇಕು