ಚಿನ್ನಕ್ಕೆ ಕೊಂಚ ಬೆಲೆ ಕಡಿಮೆಯಾದರೂ ಭರ್ಜರಿ ಚಿನ್ನದ ಶಾಪಿಂಗ್ ನಡೆಸುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಚಿನ್ನದ ಬೆಲೆ ಕೈಗೆಟಕದಂತೆ ಗಗನಕ್ಕೇರಿದೆ ಭಾರತದ ಮಾರುಕಟ್ಟೆಗಳಲ್ಲಿ ಇಂದು ಚಿನ್ನ ಖರೀದಿ ಸಹಜ ಸಂಗತಿಯಾಗಿದ್ದು, ದಿನದಲ್ಲೇ ಕೋಟ್ಯಂತರ ರೂಪಾಯಿಗಳಷ್ಟು ವ್ಯವಹಾರವನ್ನು ಈ ವ್ಯವಹಾರ ಹೊಂದಿದೆ.
ಇನ್ನು ಪೆಟ್ರೋಲ್ ಡೀಸೆಲ್ ಗಳಂತೆ ಬಂಗಾರದ ಬೆಲೆಗಳಲ್ಲೂ ಆಗಾಗ ವ್ಯತ್ಯಾಸಗಳು ಆಗುತ್ತಲೇ ಇರುತ್ತವೆ. ಇಂದು ಭಾರತದ ಮಾರುಕಟ್ಟೆಯಲ್ಲಿ ಬಂಗಾರದ (22 ಕ್ಯಾರೆಟ್) ದರವನ್ನು ನಿನ್ನೆಗೆ ಹೋಲಿಸಿದರೆ ಬೆಲೆಯಲ್ಲಿ ಕೊಂಚ ಏರಿಕೆಯಾಗಿದೆ.
ಹೌದು ಕಳೆದ ವಾರಾಂತ್ಯದಲ್ಲಿ ನೂರು ರೂನಷ್ಟು ಇಳಿಕೆ ಕಂಡಿದ್ದ ಚಿನ್ನದ ಬೆಲೆ ಇಂದು 50 ರೂ ಏರಿಕೆ ಕಂಡಿದೆ. ಆಭರಣ ಚಿನ್ನದ ಬೆಲೆ 7,890 ರೂನಿಂದ 7,940 ರೂಗೆ ಏರಿದೆ. 24 ಕ್ಯಾರಟ್ ಶುದ್ಧ ಚಿನ್ನದ ಬೆಲೆ 8,662 ರೂಗೆ ಏರಿದೆ. ಬೆಳ್ಳಿ ಬೆಲೆಯಲ್ಲಿ ಇಂದೂ ಯಾವ ವ್ಯತ್ಯಯವಾಗಿಲ್ಲ. ಬೆಂಗಳೂರಿನಲ್ಲಿ ಇದರ ಬೆಲೆ 100.50 ರೂನಲ್ಲಿ ಮುಂದುವರಿದಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 79,400 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 86,620 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,050 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 79,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 10,050 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 17ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 79,400 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 86,620 ರೂ
- 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 64,970 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,005 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 79,400 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 86,620 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,005 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 79,400 ರೂ
- ಚೆನ್ನೈ: 79,400 ರೂ
- ಮುಂಬೈ: 79,400 ರೂ
- ದೆಹಲಿ: 79,550 ರೂ
- ಕೋಲ್ಕತಾ: 79,400 ರೂ
- ಕೇರಳ: 79,400 ರೂ
- ಅಹ್ಮದಾಬಾದ್: 79,450 ರೂ
- ಜೈಪುರ್: 79,550 ರೂ
- ಲಕ್ನೋ: 79,550 ರೂ
- ಭುವನೇಶ್ವರ್: 79,400 ರೂ