ನವದೆಹಲಿ:- ಆರ್‌ಎಸ್‌ಎಸ್ ಕಚೇರಿಯಲ್ಲಿ ಮೋದಿ ನಿವೃತ್ತಿ ಘೋಷಣೆ ಬಗ್ಗೆ ಮಾತನಾಡಿದ್ದಾರೆ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಹೇಳಿದ್ದಾರೆ.
Advertisement
ಈ ಸಂಬಂಧ ಮಾತನಾಡಿದ ಅವರು, ಪ್ರಧಾನಿ ಮೋದಿಗೆ ಸೆಪ್ಟೆಂಬರ್ 17ಕ್ಕೆ 75 ವರ್ಷ ತುಂಬಲಿದೆ. ಅವರ ಪಕ್ಷದ ನಿಯಮದಂತೆ ನಿವೃತ್ತರಾಗಲು ಸಿದ್ಧತೆ ನಡೆಸಿದ್ದಾರೆ. ಹೀಗಾಗಿ, ತಮ್ಮ ನಿವೃತ್ತಿ ಅರ್ಜಿಯನ್ನು ಆರ್‌ಎಸ್‌ಎಸ್ ಕಚೇರಿಯಲ್ಲಿ ಸಲ್ಲಿಸಿರಬಹುದು. ಅಲ್ಲಿ ಗೌಪ್ಯವಾಗಿ ಚರ್ಚೆಯೂ ನಡೆದಿದೆ. ಅಲ್ಲದೇ ಸಂಘ ಪರಿವಾರವೂ ದೇಶದ ನಾಯಕತ್ವದಲ್ಲಿ ಬದಲಾವಣೆ ಬಯಸಿದೆ. ಪ್ರಧಾನಿ ಮೋದಿ ಕಾಲ ಮುಗಿದಿದೆ. ಅವರೂ ಕೂಡ ಬದಲಾವಣೆ ಬಯಸುತ್ತಾರೆ ಎಂದು ಸಂಜಯ್ ರಾವತ್ ಹೇಳಿದ್ದಾರೆ.
ಇನ್ನೂ ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ನರೇಂದ್ರ ಮೋದಿ ಭಾನುವಾರ ನಾಗ್ಪುರದ ಆರ್‌ಎಸ್‌ಎಸ್ ಕಚೇರಿಗೆ ಭೇಟಿ ನೀಡಿದ್ದರು. ಈ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ.