ಗುಂಪಾಗಿ ಸಂಚರಿಸುವ ಕೆಲವು ಆನೆಗಳಿಂದ ರಾಜ್ಯದಲ್ಲಿ ಸಮಸ್ಯೆ ಹೆಚ್ಚಾಗಿದೆ: ಸಚಿವ ಈಶ್ವರ ಖಂಡ್ರೆ

0
Spread the love

ಬೆಂಗಳೂರು: ಗುಂಪಾಗಿ ಸಂಚರಿಸುವ ಕೆಲವು ಆನೆಗಳಿಂದ ರಾಜ್ಯದಲ್ಲಿ ಸಮಸ್ಯೆ ಹೆಚ್ಚಾಗಿದೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕೊಡಗು, ಹಾಸನ, ಚಿಕ್ಕಮಗಳೂರು ಸುತ್ತಮುತ್ತ ಕಾಡಿನಿಂದ ಹೊರಬಂದು ಗುಂಪಾಗಿ ಸಂಚರಿಸುವ ಕೆಲವು ಆನೆಗಳಿಂದ ಸಮಸ್ಯೆ ಹೆಚ್ಚಾಗಿದೆ.

Advertisement

ಹೀಗಾಗಿ, 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭದ್ರಾ ಅಭಯಾರಣ್ಯದಲ್ಲಿ ಆನೆ ಧಾಮ ನಿರ್ಮಿಸಲು ಯೋಜಿಸಲಾಗಿದೆ. ಇಲ್ಲಿ ಆನೆಗಳಿಗೆ ಅಗತ್ಯ ಆಹಾರ, ನೀರು ಲಭ್ಯವಾಗುವಂತೆ ಕ್ರಮ ವಹಿಸಲು ಸೂಚಿಸಲಾಗಿದೆ.

ಕಾಡಿನ ಹೊರಗೇ ಓಡಾಡುವ 150ಕ್ಕೂ ಹೆಚ್ಚು ಆನೆಗಳನ್ನು ಗುರುತಿಸಲಾಗಿದ್ದು, ಮಿನಿ ಖೆಡ್ಡಾ ಕಾರ್ಯಾಚರಣೆ ರೂಪದಲ್ಲಿ ಆನೆಗಳನ್ನು ಧಾಮಕ್ಕೆ ಕಳಿಸಬೇಕಾಗುತ್ತದೆ. ಆದರೆ ಇದಕ್ಕೆ ಕಾಲಾವಕಾಶ ಬೇಕಾಗುತ್ತದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ದೇಶದಲ್ಲಿಯೇ ಅತಿ ಹೆಚ್ಚು 6395 ಆನೆಗಳು ರಾಜ್ಯದಲ್ಲಿವೆ. ಸರ್ಕಾರ ಪುಂಡಾನೆ ಹಾವಳಿ ತಡೆಗೆ ಮಾರ್ಗೋಪಾಯ ಕಂಡುಹಿಡಿಯಲು ನೆರೆ ರಾಜ್ಯಗಳ ಸಚಿವರೊಂದಿಗೆ ಸಭೆ ನಡಸಿದೆ. ಅಂತಾರಾಷ್ಟ್ರೀಯ ಸಮಾವೇಶ ನಡೆಸಿದೆ. ತಜ್ಞರ ಸಮಿತಿ ರಚಿಸಿ ಅಧ್ಯಯನ ನಡೆಸುತ್ತಿದೆ. ಆನೆ ಕಾರ್ಯಪಡೆಯನ್ನೂ ರಚಿಸಿದೆ. ಸಾರ್ವಜನಿಕರಿಗೆ ಸಕಾಲದಲ್ಲಿ ಆನೆಗಳ ಓಡಾಟದ ಬಗ್ಗೆ ಮಾಹಿತಿ ನೀಡುವ ಕಾರ್ಯ ಮಾಡುತ್ತಿದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here