ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಕೆಳಗೆ ಬಿದ್ದ ವ್ಯಕ್ತಿ ರಕ್ಷಿಸಿದ ರೈಲ್ವೆ ಸಿಬ್ಬಂದಿ!

0
Spread the love

ಮಂಗಳೂರು:- ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಆಯತಪ್ಪಿ ಬೀಳುತ್ತಿದ್ದ ವ್ಯಕ್ತಿಯನ್ನು ರೈಲ್ವೆ ಭದ್ರತಾ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಬಚಾವ್ ಮಾಡಿರುವಂತಹ ಘಟನೆ ಜರುಗಿದೆ.

Advertisement

ಮಂಗಳೂರಿಂದ ನೇತ್ರಾವತಿ ಎಕ್ಸ್‌ಪ್ರೆಸ್‌ ರೈಲು ಚಲಿಸುತ್ತಿದ್ದ ವೇಳೆ ಪ್ರಯಾಣಿಕ ಸಸಾಂಗ್​ ರೈಲು ಹತ್ತುತ್ತಿದ್ದಂತೆ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ.

ರೈಲು ಮತ್ತು ಪ್ಲಾಟ್​​​ಫಾರ್ಮ್ ಮಧ್ಯೆ ಸಿಲುಕಿಕೊಂಡಿದ್ದಾರೆ. ತಕ್ಷಣ ಸಸಾಂಗ್​ನನ್ನ ಆರ್​ಪಿಎಫ್​ ಹೆಡ್​ಕಾನ್ಸ್​ಟೇಬಲ್​ ಕೈ ಹಿಡಿದು ಎಳೆದು ಪ್ರಾಣ ರಕ್ಷಿಸಿದ್ದಾರೆ.

ಸಿ.ಸಿ.ಟಿ.ವಿ ಕ್ಯಾಮರಾದಲ್ಲಿ ಘಟನೆಯ ಸಂಪೂರ್ಣ ದೃಶ್ಯ ಸೆರೆ ಆಗಿದೆ.


Spread the love

LEAVE A REPLY

Please enter your comment!
Please enter your name here