ಬೆಂಗಳೂರು:-ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು, ಸಿದ್ದರಾಮಯ್ಯನವರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದಾರೆ.
Advertisement
ಎಸ್ಸಿಪಿ ಟಿಎಸ್ಪಿ ಹಣ ದುರ್ಬಳಕೆ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಇಂದು ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದವು .ಇದಕ್ಕೆ ಬಿಜೆಪಿ ಬೆಂಬಲ ನೀಡಿದ್ದು, ರಾಜ್ಯ ಸರ್ಕಾರವನ್ನ ಕುಟುಕುವ ಭರದಲ್ಲಿ ಛಲವಾದಿ ನಾರಾಯಣಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ಮಂಡಿನೋವು ಉಲ್ಲೇಖಿಸಿ ವ್ಯಂಗ್ಯವಾಡಿದರು.
ನಮ್ಮ ಜನರಿಗೆ ಅನ್ಯಾಯ ಮಾಡಿದ್ದಕ್ಕೆ ನೀವು ಕುಂಟುತ್ತಿದ್ದೀರಿ. ನಮ್ಮವರ ಹಣ ದುರುಪಯೋಗ ಮಾಡಿದ್ದಕ್ಕೆ ನೀವು ಈಗ ವ್ಹೀಲ್ ಚೇರ್ ನಲ್ಲೇ ಬರುತ್ತಿರುವುದು. ಮುಂದೆ ಬೇರೆ ಚೇರ್ ಬರುತ್ತೆ. 25 ಸಾವಿರ ಕೋಟಿ ರೂ. ದಲಿತರ ಹಣ ದುರ್ಬಳಕೆ ಆಗಿದೆ ಎಂದು ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ರೋಶ ಹೊರಹಾಕಿದರು.