HomeKarnataka Newsಕೊನೆಗೂ ರಿವಿಲ್ ಆಯ್ತು ಜೈಲಲ್ಲಿ ಪ್ರಜ್ವಲ್ ರೇವಣ್ಣ ಬಳಸಿದ್ದ ಮೊಬೈಲ್ ಸೀಕ್ರೆಟ್! 7 ಜನರ ವಿರುದ್ಧ...

ಕೊನೆಗೂ ರಿವಿಲ್ ಆಯ್ತು ಜೈಲಲ್ಲಿ ಪ್ರಜ್ವಲ್ ರೇವಣ್ಣ ಬಳಸಿದ್ದ ಮೊಬೈಲ್ ಸೀಕ್ರೆಟ್! 7 ಜನರ ವಿರುದ್ಧ FIR

For Dai;y Updates Join Our whatsapp Group

ಆನೇಕಲ್‌: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮೊಬೈಲ್ ಬಳಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಹತ್ವದ ಮಾಹಿತಿ ಹೊರಬಿದ್ದಿದೆ. ಜೈಲಿನೊಳಗೆ ಮೊಬೈಲ್ ಹಾಗೂ ಸಿಮ್‌ ಕಾರ್ಡ್‌ ತಲುಪಲು ನೆರವು ನೀಡಿದ ಆರೋಪದ ಮೇಲೆ ಏಳು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಪ್ರಜ್ವಲ್ ರೇವಣ್ಣ ಜೈಲಿನ ಬ್ಯಾರಕ್‌ನಲ್ಲೇ ಮೊಬೈಲ್ ಬಳಸುತ್ತಿದ್ದ ಆರೋಪ ಕೇಳಿಬಂದಿತ್ತು. ಮೊಬೈಲ್ ಪತ್ತೆಯಾದ ಬಳಿಕ ಪೊಲೀಸರು ಅದರ ಮೂಲ ಹಾಗೂ ಸಿಮ್‌ ಕಾರ್ಡ್‌ನ ವಿವರಗಳನ್ನು ಪರಿಶೀಲಿಸಿದಾಗ ಡಿಜೆ ಹಳ್ಳಿ ಸಂಪರ್ಕ ಪತ್ತೆಯಾಗಿತ್ತು.

ಈ ಪ್ರಕರಣದಲ್ಲಿ ಪ್ರತಾಪ್ ರಾವ್, ತೌಸಿಫ್, ಸಿದ್ದಿಕ್, ಪ್ರಕಾಶ್, ಮಂಜುನಾಥ್ ಸೇರಿದಂತೆ ಏಳು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಜ್ವಲ್ ರೇವಣ್ಣಗೆ ಮೊಬೈಲ್ ಸಿಗಲು ಜೈಲು ವಾರ್ಡನ್ ಹಾಗೂ ಕೆ.ಜೆ. ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಪ್ರಕರಣದ ಆರೋಪಿಗಳಾದ ಸಿದ್ದಿಕ್ ಹಾಗೂ ತೌಫಿಕ್‌ ನೆರವು ನೀಡಿದ್ದರು ಎನ್ನಲಾಗಿದೆ.

ಜೈಲಿನಲ್ಲಿ ಪರಿಚಯವಾಗಿದ್ದ ತೌಫಿಕ್‌ ಅನಾರೋಗ್ಯದ ಹಿನ್ನೆಲೆಯಲ್ಲಿ ಜಯನಗರ ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ಮೊಬೈಲ್ ಖರೀದಿಸಿದ್ದ ಎನ್ನಲಾಗಿದೆ. ಬಳಿಕ ಸಿದ್ದಿಕ್ ಹೆಸರಿನಲ್ಲಿ ಸಿಮ್‌ ಕಾರ್ಡ್‌ ಪಡೆದು ಅದನ್ನು ಜೈಲಿನೊಳಗೆ ಬಳಸಲಾಗುತ್ತಿತ್ತು ಎಂದು ತನಿಖೆಯಿಂದ ತಿಳಿದುಬಂದಿದೆ.

ಪೊಲೀಸರ ಮಾಹಿತಿ ಪ್ರಕಾರ, ಪ್ರಜ್ವಲ್ ರೇವಣ್ಣ ಒಂದು ಮೊಬೈಲ್‌ಗೆ ಸುಮಾರು ₹1 ಲಕ್ಷ ಹಾಗೂ ಸಿಮ್‌ ಕಾರ್ಡ್‌ಗೆ ₹50 ಸಾವಿರ ಪಾವತಿಸಿದ್ದ ಎನ್ನಲಾಗಿದೆ. ಈ ಸಿಮ್‌ ಕಾರ್ಡ್‌ ಅನ್ನು ಆಂಧ್ರಪ್ರದೇಶದ ಪುಂಗನೂರಿನಲ್ಲಿ ಖರೀದಿಸಲಾಗಿತ್ತು ಎಂಬ ಮಾಹಿತಿ ತನಿಖೆಯಲ್ಲಿ ಪತ್ತೆಯಾಗಿದೆ.

ಸಿಮ್‌ ಕಾರ್ಡ್‌ನ ಕಾಲ್‌ ಡಿಟೇಲ್ಸ್‌ ಪರಿಶೀಲಿಸಿದಾಗ ಹಲವು ಯುವತಿಯರು ಹಾಗೂ ಕುಟುಂಬಸ್ಥರಿಗೆ ಕರೆ ಮಾಡಿರುವುದು ಬೆಳಕಿಗೆ ಬಂದಿದೆ ಎನ್ನಲಾಗಿದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಯಾರ್ಯಾರೊಂದಿಗೆ ದೂರವಾಣಿ ಮೂಲಕ ಸಂಪರ್ಕದಲ್ಲಿದ್ದರು ಎಂಬುದನ್ನು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ. ಸಂಬಂಧಪಟ್ಟವರಿಗೆ ನೋಟಿಸ್ ನೀಡಿ ವಿಚಾರಣೆಗೆ ಕರೆಯುವ ಸಾಧ್ಯತೆಯೂ ಇದೆ.

ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಇನ್ನು ತನಿಖೆಯ ವೇಳೆ ಜೈಲಿನಲ್ಲಿ ಸಂಗ್ರಹಿಸಿದ್ದ ಎನ್ನಲಾದ ಸುಮಾರು 173 ಅಶ್ಲೀಲ ವಿಡಿಯೋಗಳು ಕೂಡ ಪತ್ತೆಯಾಗಿವೆ ಎಂದು ತಿಳಿದುಬಂದಿದೆ. ಈ ವಿಡಿಯೋಗಳ ಕುರಿತು ಕೂಡ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನೊಳಗೆ ಮೊಬೈಲ್ ಹೇಗೆ ಪ್ರವೇಶಿಸಿತು, ಯಾರ್ಯಾರು ಸಹಕರಿಸಿದ್ದರು ಹಾಗೂ ಮೊಬೈಲ್ ಬಳಕೆಯ ಸಂದರ್ಭದಲ್ಲಿ ಯಾರೊಂದಿಗೆ ಸಂಪರ್ಕ ಹೊಂದಲಾಗಿತ್ತು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img