ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಹಿರಿಯ ಶ್ರೀ ಗುರುಸ್ವಾಮೀಜಿ 70ನೇ ವಯಸ್ಸಿಗೆ ಲಿಂಗೈಕ್ಯರಾಗಿದ್ದಾರೆ ಶ್ರೀ ಗುರುಸ್ವಾಮೀಜಿ ಅವರು ಹನೂರು ತಾಲೂಕಿನ ಜಿ.ಕೆ ಹೊಸೂರು (ಗಂಗಾಧರನ ಕಟ್ಟೆ)ಗ್ರಾಮದ ರುದ್ರಪ್ಪ ಮತ್ತು ಪುಟ್ಟ ಮಾದಮ್ಮರ ಜೇಷ್ಠ ಪುತ್ರರಾಗಿ, 1956ರ ಆಗಸ್ಟ್ 2ರಂದು ಜನಿಸಿದ್ದರು. ನಂತರ ಸಾಲೂರು ಬ್ರಹನ್ ಮಠಕ್ಕೆ 17ನೇ ಪೀಠಾಧ್ಯಕ್ಷರಾಗಿ 1995ರ ಜನವರಿ 29 ರಂದು ಅಧಿಕಾರ ವಹಿಸಿಕೊಂಡಿದ್ದರು.
ಕಳೆದ ನಾಲ್ಕು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಶಿಷ್ಯರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಅವರನ್ನು ಕಿರಿಯ ಶ್ರೀಗಳನ್ನಾಗಿ ಪಟ್ಟಾಭಿಷೇಕ ಮಾಡಿಸಿದ್ದರು. ಒಂದು ವಾರದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಗಳು ಇಂದು ಮುಂಜಾನೆ ಲಿಂಗೈಕ್ಯರಾಗಿದ್ದಾರೆ.
ಸುತ್ತೂರು ಶ್ರೀ, ತುಮಕೂರು ಸಿದ್ದಗಂಗಾ ಮಠದ ಶ್ರೀಗಳ ಸಮ್ಮುಖದಲ್ಲಿ ಸಾಲೂರು ಬೃಹನ್ ಮಠದ ಆವರಣದಲ್ಲಿ ಸಂಜೆ 5 ಗಂಟೆಗೆ ಗುರುಸ್ವಾಮೀಜಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಮಠವು ತಿಳಿಸಿದೆ.