ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ನಿತ್ಯವೂ ಪಟ್ಟಣದ ಎಲ್ಲ ವಾರ್ಡ್‌ಗಳಲ್ಲಿಯೂ ಪೌರಕಾರ್ಮಿಕರು ಸ್ವಚ್ಛತೆಯೊಂದಿಗೆ ಸಾರ್ವಜನಿಕರ ಆರೋಗ್ಯಕ್ಕಾಗಿ ಶ್ರಮಿಸುತ್ತಿದ್ದು, ಪೌರಕಾರ್ಮಿಕರ ಸೇವೆ ಶ್ಲಾಘನೀಯ. ಪೌರಕಾರ್ಮಿಕರಿಗೆ ಸರ್ಕಾರ ಕೊಡಮಾಡುವ ಎಲ್ಲ ಸಹಾಯ, ಸೌಲಭ್ಯಗಳನ್ನು ತಲುಪಿಸಲಾಗುತ್ತಿದೆ ಎಂದು ಮುಖ್ಯಾಧಿಕಾರಿ ಸವಿತಾ ತಾಂಬ್ರೆ ಹೇಳಿದರು.
ಅವರು ಶಿರಹಟ್ಟಿಯಲ್ಲಿ ಮಂಗಳವಾರ ಪೌರಕಾರ್ಮಿಕರ ದಿನಾಚರಣೆ ನಿಮಿತ್ತ ಹಮ್ಮಿಕೊಂಡಿದ್ದ ಬೃಹತ್ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು.
ಬಸವೇಶ್ವರ ವೃತ್ತದಿಂದ ಪ್ರಾರಂಭವಾದ ಮೆರವಣಿಗೆಯಲ್ಲಿ ಪೌರಕಾರ್ಮಿಕರು ಹಾಡಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು. ಇವರಿಗೆ ಕಚೇರಿಯ ಸಿಬ್ಬಂದಿಗಳು ಕೂಡ ಸಾಥ್ ನೀಡಿದರು.
ಪ.ಪಂ ಅಧ್ಯಕ್ಷೆ ದೇವಕ್ಕ ಗುಡಿಮನಿ, ಉಪಾಧ್ಯಕ್ಷೆ ನೀಲವ್ವ ಹುಬ್ಬಳ್ಳಿ, ಸ್ಥಾಯಿ ಸಮಿತಿ ಅಧ್ಯಕ್ಷ ಹೊನ್ನಪ್ಪ ಶಿರಹಟ್ಟಿ, ಉಡಚಪ್ಪ ನೀಲಣ್ಣವರ ಸೇರಿದಂತೆ ಎಲ್ಲ ಪೌರಕಾರ್ಮಿಕರು ಹಾಗೂ ಕಚೇರಿಯ ಸಿಬ್ಬಂದಿ ಉಪಸ್ಥಿತರಿದ್ದರು.


