• About
  • Advertise
  • Privacy & Policy
  • Contact
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
No Result
View All Result
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಶರಣರ ಆದರ್ಶ ದಾಂಪತ್ಯಕ್ಕೆ ದಾರಿದೀಪ: ಡಾ. ಅನ್ನದಾನೀಶ್ವರ ಮಹಾಸ್ವಾಮೀಜಿಗಳು

Vijaya Sakshi by Vijaya Sakshi
September 4, 2026
in Gadag News
0
ಸಮಾಧಿಯಲ್ಲಿದ್ದ ದೇಹ 8 ತಿಂಗಳಾದರೂ ನಿಷ್ಕಳಂಕ!
0
SHARES
0
VIEWS
Share on FacebookShare on Twitter

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ೧೨ನೇ ಶತಮಾನದ ಶರಣರ ತತ್ವಾದರ್ಶಗಳನ್ನು ನೂತನ ದಂಪತಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಪರಸ್ಪರ ಪ್ರೀತಿ, ವಿಶ್ವಾಸ ಹಾಗೂ ಗೌರವದಿಂದ ಬದುಕು ಸಾಗಿಸಬೇಕು ಎಂದು ಮುಂಡರಗಿಯ ನಾಡೋಜ ಡಾ. ಅನ್ನದಾನೀಶ್ವರ ಮಹಾಸ್ವಾಮೀಜಿಗಳು ಹೇಳಿದರು.

ಇಲ್ಲಿನ ಅನ್ನದಾನೀಶ್ವರ ಶಾಖಾ ಮಠದಲ್ಲಿ ಶ್ರಾವಣ ಮಾಸದ ಅಂಗವಾಗಿ ಹಮ್ಮಿಕೊಂಡಿದ್ದ ಶರಣರ ತತ್ವಚಿಂತನೆ ಪ್ರವಚನ, ಮಂಗಲೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದ ಸಾನಿಧ್ಯ ವಹಿಸಿ ಅವರು ಮಾತನಾಡಿದರು.

ಶಾಖಾ ಮಠ ನಿರ್ಮಾಣದ ಸಂದರ್ಭದಲ್ಲಿ ಈ ಸ್ಥಳದಲ್ಲಿ ಮೂವರು ಶರಣರ ಅಸ್ಥಿಪಂಜರಗಳು ಪತ್ತೆಯಾಗಿದ್ದು, ಸಂಶೋಧನೆಯಿಂದ ಅವು ಸುಮಾರು ೪೦೦ ವರ್ಷಗಳಷ್ಟು ಹಳೆಯವು ಎಂಬುದು ತಿಳಿದುಬಂದಿದೆ. ಹೀಗಾಗಿ ಲಕ್ಕುಂಡಿಯ ಅನ್ನದಾನೀಶ್ವರ ಶಾಖಾ ಮಠದ ಗದ್ದುಗೆ ವಿಶೇಷ ಮಹತ್ವ ಹೊಂದಿದೆ ಎಂದು ಶ್ರೀಗಳು ತಿಳಿಸಿದರು.

ಮುಂಡರಗಿಯ ಅನ್ನದಾನೀಶ್ವರ ಸಂಸ್ಥಾನ ಮಠವು ತ್ರಿವಿಧ ದಾಸೋಹ ಪರಂಪರೆಯನ್ನು ಹೊಂದಿದ್ದು, ನಾಡಿನ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಭೂದಾನ ಹಾಗೂ ಧನಸಹಾಯ ನೀಡಿದೆ. ಈ ಹಿನ್ನೆಲೆ ಲಕ್ಕುಂಡಿ ಶಾಖಾ ಮಠದ ಅಭಿವೃದ್ಧಿಗೂ ಜನಪ್ರತಿನಿಧಿಗಳು ಅಗತ್ಯ ಅನುದಾನ ಒದಗಿಸಬೇಕು ಎಂದು ಮನವಿ ಮಾಡಿದರು.

ಮಾಜಿ ಸಚಿವ ಬಿ.ಆರ್. ಯಾವಗಲ್ ಮಾತನಾಡಿ, ನಾಡಿನಲ್ಲಿ ಬರಗಾಲದ ಛಾಯೆ ಆವರಿಸಿರುವ ಸಂದರ್ಭದಲ್ಲಿ ಶರಣರ ತತ್ವಬೋಧನೆಗಳನ್ನು ಸಾರುವ ಪುರಾಣ ಹಾಗೂ ಪ್ರವಚನ ಕಾರ್ಯಕ್ರಮಗಳು ನಡೆಯುತ್ತಿರುವುದು ಶ್ಲಾಘನೀಯ ಎಂದರು.

ಬಿಜೆಪಿ ಯುವ ಮುಖಂಡ ಉಮೇಶಗೌಡ ಪಾಟೀಲ ಮಾತನಾಡಿ, ಉತ್ತಮ ಸಂಸ್ಕೃತಿ, ಸಂಪ್ರದಾಯ ಹಾಗೂ ಪರಂಪರೆಯ ಶ್ರೀಮಂತಿಕೆಯನ್ನು ಭಾರತ ಹೊಂದಿದೆ. ಅನೇಕ ಶರಣರು ತಾವು ನುಡಿದಂತೆ ನಡೆದು ಸಮಾಜಕ್ಕೆ ಮಾರ್ಗದರ್ಶಕರಾಗಿದ್ದು, ಅವರ ತತ್ವಾದರ್ಶಗಳ ಪ್ರವಚನ ಹಾಗೂ ಪುರಾಣಗಳು ಸಮಾಜದಲ್ಲಿನ ಸ್ವಾರ್ಥ ಮತ್ತು ಅಹಂಕಾರವನ್ನು ದೂರ ಮಾಡುವಲ್ಲಿ ಸಹಕಾರಿಯಾಗುತ್ತಿವೆ ಎಂದು ಹೇಳಿದರು.

ಹರ್ಲಾಪುರದ ಡಾ. ಕೊಟ್ಟೂರೇಶ್ವರ ಸ್ವಾಮೀಜಿ ಹಾಗೂ ಕುಕನೂರಿನ ಡಾ. ಮಹಾದೇವ ಸ್ವಾಮೀಜಿ ಮಾತನಾಡಿದರು. ಡಾ. ಗಿರಿಜಾ ಹಸಬಿ, ಷಡಕ್ಷರಯ್ಯ ಬದ್ನಿಮಠ ಹಾಗೂ ವೀರಣ್ಣ ಕರಿಯಲ್ಲಪ್ಪನವರ ಸಂಗೀತ ಸೇವೆ ಸಲ್ಲಿಸಿದರು.

ಶಂಕ್ರಯ್ಯ ಹಿರೇಮಠ, ಯುವ ಧುರೀಣ ವೀರಯ್ಯ ಗಂಧದ, ತಾ.ಪಂ. ಮಾಜಿ ಸದಸ್ಯ ಮಹೇಶ ಮುಸ್ಕಿನಭಾವಿ, ಗ್ರಾ.ಪಂ. ಮಾಜಿ ಅಧ್ಯಕ್ಷ ಕೆ.ಎಸ್. ಪೂಜಾರ, ನಿವೃತ್ತ ಶಿಕ್ಷಕ ಅಶೋಕ ಬೂದಿಹಾಳ, ಲಕ್ಕುಂಡಿ ಬಿಜೆಪಿ ಮಂಡಲ ಅಧ್ಯಕ್ಷ ಪ್ರಕಾಶ ಅರಹುಣಶಿ, ನಿಂಗಪ್ಪ ಗುಂಜಳ ಹಾಗೂ ಚನ್ನಪ್ಪ ಹೂಗಾರ ವೇದಿಕೆಯಲ್ಲಿದ್ದರು.

ಪ್ರವಚನ ಕಾರ್ಯಕ್ರಮದಲ್ಲಿ ಸೇವೆ ಸಲ್ಲಿಸಿದ ಮಹನೀಯರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಮುತ್ತಪ್ಪ ನೋಟಗಾರ ಸ್ವಾಗತಿಸಿದರು. ಅಂಬರೀಶ ಕರೆಕಲ್ಲ ನಿರೂಪಿಸಿದರು. ಶಿಕ್ಷಕ ಬಸವರಾಜ ಕಣವಿ ವಂದಿಸಿದರು.

ಶರಣರ ತತ್ವಾದರ್ಶಗಳು ಕೇವಲ ಮಾತಿಗೆ ಸೀಮಿತವಾಗದೆ ಪ್ರತಿಯೊಬ್ಬರ ಬದುಕಿನ ಭಾಗವಾಗಬೇಕು. ವಿಶೇಷವಾಗಿ ನೂತನ ದಂಪತಿಗಳು ಪರಸ್ಪರ ಪ್ರೀತಿ, ವಿಶ್ವಾಸ ಮತ್ತು ಸಹಕಾರದಿಂದ ಜೀವನ ನಡೆಸಿದಾಗ ದಾಂಪತ್ಯ ಬದುಕು ಸುಂದರವಾಗುತ್ತದೆ.

– ನಾಡೋಜ ಡಾ. ಅನ್ನದಾನೀಶ್ವರ ಮಹಾಸ್ವಾಮೀಜಿಗಳು

Tags: BreakingNewsgadagnewsKarnatakaVijayasakshivijayasakshinews
Previous Post

ಆಹಾರದ ಅರಿವಿಲ್ಲದಿದ್ದರೆ ದೇಶದ ಭವಿಷ್ಯ ಅಭದ್ರ: ಡಾ. ಸಾವಿತ್ರಿ ಬ್ಯಾಡಗಿ

Next Post

ವಚನ ಸಾಹಿತ್ಯಕ್ಕೆ ಕಲಬುರ್ಗಿ ಕೊಡುಗೆ ಅಪಾರ : ಡಾ. ತೋಂಟದ ಸಿದ್ಧರಾಮ ಸ್ವಾಮಿಗಳು

Vijaya Sakshi

Vijaya Sakshi

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಸಮಾಧಿಯಲ್ಲಿದ್ದ ದೇಹ 8 ತಿಂಗಳಾದರೂ ನಿಷ್ಕಳಂಕ!

ವಚನ ಸಾಹಿತ್ಯಕ್ಕೆ ಕಲಬುರ್ಗಿ ಕೊಡುಗೆ ಅಪಾರ : ಡಾ. ತೋಂಟದ ಸಿದ್ಧರಾಮ ಸ್ವಾಮಿಗಳು

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest
Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

October 21, 2026

ದಸರಾ ಹಬ್ಬದ ದಿನವೇ ಖಾಸಗಿ ಶಾಲಾ ಶಿಕ್ಷಕಿ ಸಾವು! ತುಂಗಭದ್ರಾ ಹಿನ್ನೀರಿನಲ್ಲಿ ಮೃತದೇಹ ಪತ್ತೆ

October 20, 2026
ನಕಲಿ ಔಷಧ ಜಾಲದ ತನಿಖೆ ಮತ್ತಷ್ಟು ಚುರುಕು: ಔಷಧ ಸೇವಿಸಿದ ರೋಗಿಗಳ ಮಾಹಿತಿ ಸಂಗ್ರಹಕ್ಕೆ ಮುಂದಾದ FDA ಅಧಿಕಾರಿಗಳು

ನಕಲಿ ಔಷಧ ಜಾಲದ ತನಿಖೆ ಮತ್ತಷ್ಟು ಚುರುಕು: ಔಷಧ ಸೇವಿಸಿದ ರೋಗಿಗಳ ಮಾಹಿತಿ ಸಂಗ್ರಹಕ್ಕೆ ಮುಂದಾದ FDA ಅಧಿಕಾರಿಗಳು

September 21, 2026
ದಸರಾ ಮೆರವಣಿಗೆಯಲ್ಲಿ ಅವಾಂತರ: ಅಂಬಾರಿ ಹೊತ್ತಿದ್ದ ಸೋಮಣ್ಣನ ಆರ್ಭಟಕ್ಕೆ ಕಾರು ಜಖಂ

ದಸರಾ ಮೆರವಣಿಗೆಯಲ್ಲಿ ಅವಾಂತರ: ಅಂಬಾರಿ ಹೊತ್ತಿದ್ದ ಸೋಮಣ್ಣನ ಆರ್ಭಟಕ್ಕೆ ಕಾರು ಜಖಂ

October 21, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಮದುವೆ ನಿರಾಕರಣೆಗೇ ಜೀವಭಯ: ತಂದೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಯುವತಿ

ಸುಪ್ರೀಂ ತೀರ್ಪನ್ನು ವಿರೋಧಿಸುವುದು ಅಪರಾಧವಲ್ಲ: ಪೋಸ್ಟರ್ ಅಂಟಿಸಿದ್ದ 13 ಮಂದಿ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

October 21, 2026
ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು: ನಾಲ್ಕು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಜಲಸಮಾಧಿ!

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು: ನಾಲ್ಕು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಜಲಸಮಾಧಿ!

October 21, 2026
ಹೆತ್ತ ಮಕ್ಕಳಿಗಿಂತ ಪ್ರಿಯಕರನೇ ಮುಖ್ಯವಾಯ್ತಾ? ಅಕ್ರಮ ಸಂಬಂಧ ವಿರೋಧಿಸಿದ್ದ ಅವಳಿ ಮಕ್ಕಳ ಭೀಕರ ಹತ್ಯೆ!

ಹೆತ್ತ ಮಕ್ಕಳಿಗಿಂತ ಪ್ರಿಯಕರನೇ ಮುಖ್ಯವಾಯ್ತಾ? ಅಕ್ರಮ ಸಂಬಂಧ ವಿರೋಧಿಸಿದ್ದ ಅವಳಿ ಮಕ್ಕಳ ಭೀಕರ ಹತ್ಯೆ!

October 21, 2026
ಬೆಳಗ್ಗೆಯೇ ಭೀಕರ ಬಸ್ ದುರಂತ: ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಬಸ್ ನಜ್ಜುಗುಜ್ಜು, ಉಧಂಪುರದಲ್ಲಿ ಇಬ್ಬರು ಬಲಿ!

ಬೆಳಗ್ಗೆಯೇ ಭೀಕರ ಬಸ್ ದುರಂತ: ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಬಸ್ ನಜ್ಜುಗುಜ್ಜು, ಉಧಂಪುರದಲ್ಲಿ ಇಬ್ಬರು ಬಲಿ!

October 21, 2026

Recent News

Vijaya Sakshi News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಮದುವೆ ನಿರಾಕರಣೆಗೇ ಜೀವಭಯ: ತಂದೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಯುವತಿ

ಸುಪ್ರೀಂ ತೀರ್ಪನ್ನು ವಿರೋಧಿಸುವುದು ಅಪರಾಧವಲ್ಲ: ಪೋಸ್ಟರ್ ಅಂಟಿಸಿದ್ದ 13 ಮಂದಿ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

October 21, 2026
ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು: ನಾಲ್ಕು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಜಲಸಮಾಧಿ!

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು: ನಾಲ್ಕು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಜಲಸಮಾಧಿ!

October 21, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper