ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಶ್ರೀ ಕಾಳಿದಾಸ ಶಿಕ್ಷಣ ಸಮಿತಿಯ ರಜತ ಮಹೋತ್ಸವ ಅಂಗವಾಗಿ ವರ್ಷಪೂರ್ತಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಿಗೆ ಜೂನ್ ೭ರಂದು ಅಧಿಕೃತ ಚಾಲನೆ ದೊರೆಯಲಿದೆ.
ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿರುವ ಈ ಮಹೋತ್ಸವ ಕಾರ್ಯಕ್ರಮವನ್ನು ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಸಂಜೆ ೫:೩೦ಕ್ಕೆ ನಗರದ ಕಳಸಾಪುರ ರಸ್ತೆಯಲ್ಲಿರುವ ಶ್ರೀ ಬಯಲು ಆಂಜನೇಯ ದೇವಸ್ಥಾನ ಆವರಣದಲ್ಲಿ ಅಮೃತಹಸ್ತದಿಂದ ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮಕ್ಕೂ ಮುನ್ನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪ್ರಾಯೋಜಿತ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸಸಿ ನೆಡುವ ಕಾರ್ಯಕ್ರಮ ಜರುಗಲಿವೆ ಎಂದು ರಜತ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.



