ಕುಮಾರ ಶಿವಯೋಗಿಗಳ ಸಮಾಜ ಸೇವೆ ಅನನ್ಯ

0
naregal
Spread the love

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಶಿವಯೋಗ ಮಂದಿರದಲ್ಲಿ ಮಠಗಳನ್ನು ನಿರ್ವಹಿಸುಲು ಸನ್ನದ್ಧರಾಗುವ ವಟುಗಳನ್ನು ತಯಾರಿಸುವ ಗುರುಕುಲವನ್ನು ಸ್ಥಾಪಿಸಿ ಈ ನಾಡಿಗೆ ಕಲ್ಯಾಣವನ್ನುಂಟುಮಾಡಿದವರು ಹಾನಗಲ್ಲ ಗುರುಕುಮಾರ ಶಿವಯೋಗಿಗಳು. ಅವರ ದೂರದೃಷ್ಟಿಯ ಫಲವಿಂದು ಹೆಮ್ಮರವಾಗಿ ಬೆಳೆದು, ನಾಡಿನಾದ್ಯಂತ ಅನೇಕ ಹರ ಗುರು ಚರ ಮೂರ್ತಿಗಳನ್ನು ಕಾಣುವಲ್ಲಿ ಅವರ ಸೇವೆ ಅಪಾರವಾಗಿದೆ. ಕುಮಾರ ಶಿವಯೋಗಿಗಳು ಈ ನಾಡಿಗೆ, ಸಮಾಜಕ್ಕೆ ಸಲ್ಲಿಸಿರುವ ಸೇವೆ ಅನನ್ಯವಾದುದು ಎಂದು ಹಾಲಕೆರೆ ಸಂಸ್ಥಾನ ಮಠದ ಶ್ರೀ ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳು ಹೇಳಿದರು.

Advertisement

ಸಮೀಪದ ನಿಡಗುಂದಿಕೊಪ್ಪದ ಶಾಖಾ ಶಿವಯೋಗ ಮಂದಿರದಲ್ಲಿ ಸೋಮವಾರ ಜರುಗಿದ ಲಿಂ. ಶ್ರೀ ಕುಮಾರ ಮಹಾ ಶಿವಯೋಗಿಗಳವರ 94ನೆ ಪುಣ್ಯ ಸ್ಮರಣೋತ್ಸವ ಹಾಗೂ ರಥೋತ್ಸವದ ನಂತರ ನಡೆದ ಧಾರ್ಮಿಕ ಸಭೆಯ ಪಾವನ ಸನ್ನಿಧಾನವನ್ನು ವಹಿಸಿ ಅವರು ಆಶೀರ್ವಚನ ನೀಡಿದರು.

ಹಾನಗಲ್ಲ ಕುಮಾರ ಶಿವಯೋಗಿಗಳು, ಹಾವೇರಿಯ ಶಿವಬಸವ ಮಹಾಸ್ವಾಮಿಗಳವರು ಶಿವಯೋಗ ಮಂದಿರದ ಶಾಖಾ ಮಠವನ್ನು ನಿಡಗುಂದಿಕೊಪ್ಪದಲ್ಲಿ ಸ್ಥಾಪಿಸಿ ಈ ಭಾಗದ ಜನರಿಗೆ ಆರೋಗ್ಯ ದಾಸೋಹ ನೀಡುವ ಕಾರ್ಯಕ್ಕೆ ಇಲ್ಲಿನ ಸ್ವಾಮಿಗಳನ್ನು ನೇಮಿಸಿದರು. ಅವರ ಅಪೇಕ್ಷೆಯಂತೆ ಶ್ರೀಮಠದ ಚನ್ನಬಸವ ಮಹಾಸ್ವಾಮಿಗಳು, ಶಿವಬಸವ ಮಹಾಸ್ವಾಮಿಗಳು ಆರೋಗ್ಯ ದಾಸೋಹದ ಕಾರ್ಯವನ್ನು ಅನವರತ ಮಾಡುತ್ತ ಬಂದರು. ರಾಜ್ಯದಲ್ಲಿರುವ ಬಹುತೇಕ ಮಠಗಳು ಅನ್ನ ದಾಸೋಹ, ಶೈಕ್ಷಣಿಕ ದಾಸೋಹ ಮುಂತಾದವುಗಳನ್ನು ಮಾಡುತ್ತ ಬಂದಿವೆ. ಆದರೆ ಭಕ್ತ ಜನತೆಗೆ ಅತಿ ಅವಶ್ಯಕವಾದ ಆರೋಗ್ಯ ದಾಸೋಹವನ್ನು ನೀಡುವ ಮಠ ಅದು ಯಾವುದಾದರೂ ಇದ್ದರೆ ಅದು ನಿಡಗುಂದಿಕೊಪ್ಪದ ಮಠವೊಂದೇ ಎಂದು ತಿಳಿಸಿದ ಶ್ರೀಗಳು, ಈ ಹಿಂದಿನ ಶ್ರೀಗಳು ಕೈಗೊಂಡ ಆರೋಗ್ಯ ದಾಸೋಹವನ್ನು ಇಂದಿನ ಪೀಠಾಧಿಪತಿಗಳಾಗಿರುವ ಅಭಿನವ ಚನ್ನಬಸವ ಮಹಾಸ್ವಾಮಿಗಳೂ ಮುಂದುವರೆಸಿಕೊಂಡು ಬರುತ್ತಿರುವುದು ಶ್ಲಾಘನೀಯ ಎಂದರು.

ಶ್ರೀ ಅಭಿನವ ಚನ್ನಬಸವ ಮಹಾಸ್ವಾಮಿಗಳು ಆಶೀರ್ವಚನ ನೀಡಿ, ಶ್ರೀ ಮಠದಲ್ಲಿ ಹಿಂದಿನಿಂದಲೂ ನಡೆದು ಬಂದಿರುವ ಆರೋಗ್ಯ ದಾಸೋಹ ಎಂದಿಗೂ ಮುಂದುವರೆಯುತ್ತದೆ. ಈ ಮಠದ ಸದ್ಭಕ್ತರು ಮಠದ ಮೇಲೆ ಅಪಾರ ಶ್ರದ್ಧೆ-ಭಕ್ತಿಯನ್ನಿರಿಸಿದ್ದಾರೆ. ಅವರೆಲ್ಲರ ಸಹಾಯ-ಸಹಕಾರಗಳಿಂದ ಶ್ರೀಮಠವು ಏಳಿಗೆಯ ಹಾದಿಯಲ್ಲಿ ಮುನ್ನಡೆಯುತ್ತಿದೆ. ಮಠದ ಜಾತ್ರಾ ಮಹೋತ್ಸವದ ನಿಮಿತ್ಯ ಎರಡು ದಿನಗಳ ಕಾಲ ನಡೆದ ಎಲ್ಲ ಸಭೆ, ಸಮಾರಂಭ, ಪ್ರಸಾದ ಮತ್ತಿತರ ಕಾರ್ಯಗಳಿಗೆ ಭಕ್ತರು ನೀಡಿದ ಸಹಕಾರವನ್ನು ನಾವೆಂದಿಗೂ ಮರೆಯುವಂತಿಲ್ಲ. ಈ ಶ್ರದ್ಧೆ ಭಕ್ತರಲ್ಲಿ ಎಂದಿಗೂ ಹೀಗೇ ಇರಲಿ ಎಂದು ನಾವು ಶ್ರೀ ಚನ್ನಬಸವೇಶನಲ್ಲಿ ಪ್ರಾರ್ಥಿಸುತ್ತೇವೆ ಎಂದರು. ನಂತರ ಅಭಿನವ ಚನ್ನಬಸವ ಮಹಾಸ್ವಾಮಿಗಳವರಿಗೆ ತುಲಾಭಾರ ಸೇವೆ ನಡೆಯಿತು.

ಸಮಾರಂಭದಲ್ಲಿ ಪ್ರಭುಗೌಡ ಪಾಟೀಲ, ಡಾ. ಅಂದಾನಗೌಡ ಪಾಟೀಲ, ನರೇಗಲ್ಲ ಬ್ಲಾಕ್ ಕಮಿಟಿ ಅಧ್ಯಕ್ಷ ಶರಣಪ್ಪ ಬೆಟಗೇರಿ, ನರೇಗಲ್ಲ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಮಂಜುಳಾ ರೇವಡಿ ಮುಂತಾದ ಗಣ್ಯರನ್ನು ಶ್ರೀಗಳು ಆಶೀರ್ವದಿಸಿ, ಸನ್ಮಾನಿಸಿದರು. ಕೊಪ್ಪಳದ ಸಂಗೀತಗಾರ್ತಿ ವಿಶಾಲಾಕ್ಷಿ ಹಿರೇಮಠ ಸಂಗೀತ ಸೇವೆ ನೀಡಿದರು.


Spread the love

LEAVE A REPLY

Please enter your comment!
Please enter your name here