ಇನ್ನರ್ ವೀಲ್ ಕ್ಲಬ್‌ನ ಸಾಮಾಜಿಕ ಕಾರ್ಯ ಶ್ಲಾಘನೀಯ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಚಳಿಗಾಲದ ಚಳಿಯಿಂದ ನಮ್ಮನ್ನು ಬೆಚ್ಚಗೆ ಇಟ್ಟುಕೊಳ್ಳುವುದು ಅವಶ್ಯ. ಹೊದಿಕೆಗಳು ನಮಗೆ ಬೆಚ್ಚಗಿನ ಅನುಭವ ಮತ್ತು ಸುರಕ್ಷತೆಯನ್ನು ಒದಗಿಸುತ್ತವೆ. ದೇಹದ ತಾಪಮಾನವನ್ನು ಕಾಪಾಡಿ ಯಾವುದೇ ರೋಗರುಜಿನಗಳು ಬರದಂತೆ ತಡೆಯುತ್ತವೆ. ಈ ಹಿನ್ನೆಲೆಯಲ್ಲಿ ಇನ್ನರ್ ವ್ಹೀಲ್ ಕ್ಲಬ್ ಗದಗ-ಬೆಟಗೇರಿ ವತಿಯಿಂದ ಸರಕಾರಿ ವಿಶೇಷ ಚೇತನ ಮಕ್ಕಳಿಗೆ ಹೊದಿಕೆಗಳನ್ನು ನೀಡಿ ತಮ್ಮ ಸಾಮಾಜಿಕ ಜವಾಬ್ದಾರಿಯನ್ನು ನಿರ್ವಹಿಸಿದ್ದಾರೆ. ಇನ್ನರ್ ವ್ಹೀಲ್ ಸಂಸ್ಥೆ ಗದಗ-ಬೆಟಗೇರಿಯ ಸಾಮಾಜಿಕ ಕಾರ್ಯ ಶ್ಲಾಘನೀಯ ಎಂದು ಕ್ಷೇತ್ರ ಸಮನ್ವಯ ಅಧಿಕಾರಿ ಎಸ್.ಪಿ. ಪ್ರಭಯ್ಯನಮಠ ಹೇಳಿದರು.

Advertisement

ಇನ್ನರ್ ವ್ಹೀಲ್ ಕ್ಲಬ್ ಗದಗ-ಬೆಟಗೇರಿ ವತಿಯಿಂದ ಸರಕಾರಿ ವಿಶೇಷ ಚೇತನ ಮಕ್ಕಳಿಗೆ ಹೊದಿಕೆಗಳನ್ನು ಕೊಡುಗೆಯಾಗಿ ವಿತರಿಸಿ ಅವರು ಮಾತನಾಡಿದರು.

ಸಂಸ್ಥೆಯ ಅಧ್ಯಕ್ಷರಾದ ಅಶ್ವಿನಿ ಜಗತಾಪ ಮಾತನಾಡಿ, ಸಮಾಜದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ಸಿಗುವ ಸನ್ಮಾನ ಮತ್ತು ಅನುಕೂಲತೆಗಳು ವಿಶೇಷ ಚೇತನ ಮಕ್ಕಳಿಗೂ ಸಿಗಬೇಕು. ಈ ನಿಟ್ಟಿನಲ್ಲಿ ನಮ್ಮ ಸಂಸ್ಥೆಯಿಂದ ಸಾಧ್ಯವಾದಷ್ಟು ಅವಶ್ಯಕತೆಗಳನ್ನು ಪೂರೈಸುತ್ತೇವೆ ಎಂದರು.

ಸಂಸ್ಥೆಯ ಕಾರ್ಯದರ್ಶಿ ಶಿವಲೀಲಾ ಅಕ್ಕಿ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಶ್ಯಾಮ ಲಾಂಡೆ, ಕೋಶಾಧ್ಯಕ್ಷರಾದ ಪುಷ್ಪ ಭಂಡಾರಿ, ಸಂಪಾದಕರಾದ ವೀಣಾ ಕಾವೇರಿ, ಸಿಪಿಸಿಸಿ ಮೀನಾಕ್ಷಿ ಕೊರವಣ್ಣನವರ್, ಸದಸ್ಯರಾದ ಸುಮಾ ಪಾಟೀಲ ಮತ್ತು ರೇಖಾ ರೊಟ್ಟಿ ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here