Crime News: ಕುಡಿದ ಮತ್ತಲ್ಲಿ ತಾಯಿ ಕೊಂದು ನೇಣಿಗೆ ಶರಣಾದ ಮಗ!

0
Spread the love

ಆನೇಕಲ್:- ಮಗನೋರ್ವ ಹೆತ್ತ ತಾಯಿ ಕೊಂದು ಬಳಿಕ ತಾನೂ ಕೂಡ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರು ಹೊರವಲಯದ ಸೂರ್ಯಸಿಟಿ ಸಮೀಪದ ಹಳೆ ಚಂದಾಪುರ ಬಳಿ ಜರುಗಿದೆ.

Advertisement

41 ವರ್ಷದ ಮಹಾಲಕ್ಷ್ಮಿ ಕೊಲೆಯಾದ ತಾಯಿ. 21 ವರ್ಷದ ರಮೇಶ್ ತಾಯಿಯನ್ನ ಕೊಲೆ ಮಾಡಿ ಆತ್ಮಹತ್ಯೆ ಶರಣಾದ ಮಗ. ಮೃತರು ಚಿತ್ರದುರ್ಗ ಮೂಲದ ಚಳ್ಳಕೆರೆ ಮೂಲದವರು ಎಂದು ತಿಳಿದು ಬಂದಿದೆ.

ಮೃತರ ಕುಟುಂಬ ಕಳೆದ ಕೆಲ ವರ್ಷಗಳ ಹಿಂದೆ ಕೆಲಸ ಅರಸಿಕೊಂಡು ಬೆಂಗಳೂರಿಗೆ ಬಂದಿದ್ದರು. ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ರು. ಆದರೆ ಮಗ ಕುಡಿತದ ದಾಸನಾಗಿದ್ದ. ಇದೇ ವಿಚಾರವಾಗಿ ಆಗಾಗ್ಗೆ ಗಲಾಟೆ ನಡೆಯುತ್ತಿತ್ತು.

ನಿನ್ನೇ ರಾತ್ರಿಯೂ ಕುಡಿದು ಬಂದು ತಾಯಿ ಮಹಾಲಕ್ಷ್ಮಿ ಜೊತೆ ಗಲಾಟೆ ಮಾಡಿದ್ದಾನೆ. ಗಲಾಟೆ ವಿಕೋಪಕ್ಕೆ ತಿರುಗಿ ಮೊಬೈಲ್ ಚಾರ್ಜಿಂಗ್ ವೈರ್ ನಿಂದ ತಾಯಿಯ ಕತ್ತಿಗೆ ಬಿಗಿದು ಕೊಲೆಗೈದಿದ್ದಾನೆ. ಬಳಿಕ ತಾನು ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮೃತ ದೇಹಗಳನ್ನ ಅತ್ತಿಬೆಲೆ ಆಕ್ಸ್‌ಫರ್ಡ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.


Spread the love

LEAVE A REPLY

Please enter your comment!
Please enter your name here