ರಾಜ್ಯ ಸರ್ಕಾರ ಆಡಳಿತಾತ್ಮಕವಾಗಿ ಸಂಪೂರ್ಣವಾಗಿ ವಿಫಲವಾಗಿದೆ: ಕೋಟ ಶ್ರೀನಿವಾಸ ಪೂಜಾರಿ

0
Spread the love

ಚಿಕ್ಕಮಗಳೂರು: ರಾಜ್ಯ ಸರ್ಕಾರ ಆಡಳಿತಾತ್ಮಕವಾಗಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು,

Advertisement

ಸಿ.ಟಿ ರವಿ  ಅವರನ್ನು ಪೊಲೀಸರ ಮೂಲಕ ಊರೆಲ್ಲಾ ತಿರುಗಿಸಿ ಏನೋ ಸಾಧನೆ ಮಾಡಿದ್ದೇವೆ ಎಂಬ ಭ್ರಮೆ ಬೇಡ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗಟ್ಟಿದೆ. ರಾಜ್ಯ ಸರ್ಕಾರ ಆಡಳಿತಾತ್ಮಕವಾಗಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವಿರೋಧ ಪಕ್ಷದಲ್ಲಿ ಆಂತರಿಕ ಕಚ್ಚಾಟ ಇದ್ರೆ ಪಕ್ಷದ ಮೇಲೆ ಮಾತ್ರ ಪರಿಣಾಮ ಬೀರುತ್ತೆ. ಆಡಳಿತ ಪಕ್ಷದಲ್ಲಿ ಆಂತರಿಕ ಕಚ್ಚಾಟ ಇರಬಾರದು. ಆಡಳಿತ ಪಕ್ಷದಲ್ಲಿ ಆಂತರಿಕ ಕಚ್ಚಾಟ ಜೋರಾದ್ರೆ ಜನರಿಗೆ ತೊಂದರೆ ಆಗುತ್ತದೆ ಎಂದು ಎಚ್ಚರಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here