Power Tariff Hike: ಹಾಲಿನ ದರ ಬೆನ್ನಲ್ಲೇ ವಿದ್ಯುತ್ ದರ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ..!

0
Spread the love

ಬೆಂಗಳೂರು: ಬೆಲೆ ಏರಿಕೆಯ ಹೊಡೆತದಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಕೂಡ ಶಾಕ್ ನೀಡಿದೆ. ಹೌದು ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಳ ಮಾಡಿ ಕೆಇಆರ್‌ಸಿ ಇಂದು ಅಧಿಕೃತ ಆದೇಶ ಹೊರಡಿಸಿದ್ದು, ಪರಿಷ್ಕೃತ ವಿದ್ಯುತ್ ದರ ಏಪ್ರಿಲ್‌ 1ರಿಂದಲೇ ಅನ್ವಯವಾಗಲಿದೆ.

Advertisement

ಯೂನಿಟ್‍ಗೆ 49 ಪೈಸೆ ಏರಿಕೆ ಮಾಡುವಂತೆ ಡಿಸೆಂಬರ್ ಕೊನೆಯ ವಾರದಲ್ಲಿ ಎಸ್ಕಾಂಗಳು ಕೆಇಆರ್‌ಸಿ ಪ್ರಸ್ತಾವನೆ ಸಲ್ಲಿಸಿದ್ದವು. ಪ್ರಸ್ತಾವನೆಯಂತೆ ಉತ್ಪಾದನೆಯ ಖರ್ಚು-ವೆಚ್ಚ ಮತ್ತು ನಿರ್ವಹಣೆಯ ನಷ್ಟ ಸರಿದೂಗಿಸುವ ನಿಟ್ಟಿನಲ್ಲಿ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಹೀಗಾಗಿ ಇಂದು ಕೆಇಆರ್‌ಸಿ ಅಧಿಕೃತವಾಗಿ ಪ್ರತಿ ಯೂನಿಟ್​ ವಿದ್ಯುತ್​ಗೆ 36 ಪೈಸೆ ಏರಿಕೆ ಮಾಡಿ ಆದೇಶ ಹೊರಡಿಸಿದೆ. ಏಪ್ರಿಲ್ 1 ರಿಂದಲೇ ಹೊಸ ದರ ಜಾರಿಯಾಗಲಿದ್ದು, ರಾಜ್ಯದ ಜನರಿಗೆ ವಿದ್ಯುತ್ ದರದ ಬಿಸಿ ತಟ್ಟಲಿದೆ.


Spread the love

LEAVE A REPLY

Please enter your comment!
Please enter your name here