ಬೆಂಗಳೂರು: ರಾಜ್ಯ ಸರ್ಕಾರ ಪಾಪರ್ ಆಗಿದೆ, ಅವರ ಬಳಿ ಹಣ ಇಲ್ಲ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಕಿಡಿಕಾರಿದ್ಧಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಪಾಪರ್ ಆಗಿದೆ, ಅವರ ಬಳಿ ಹಣ ಇಲ್ಲ. ರಸ್ತೆ ಗುಂಡಿಗಳನ್ನು ನಾವೇ ಮುಚ್ಚೋಣ, ಜನ ಸಹಕಾರ ಮಾಡಿ ಎಂದಿದ್ದಾರೆ.
ನಿಮ್ಮ ಬಳಿ ಹಣ ಇಲ್ಲ ಅಂದ್ರೆ ಓಪನ್ ಆಗಿ ಡಿಕ್ಲೇರ್ ಮಾಡಿ. ಮುಚ್ಚಿರುವ ಗುಂಡಿ ಲೆಕ್ಕ ಹೇಳುತ್ತಿದ್ದೀರಲ್ಲ ಅಲ್ವಾ, ತೆರೆದಿರುವ ಗುಂಡಿಗಳ ಬಗ್ಗೆ ಹೇಳಿ. ಸಾವಿರ ಗುಂಡಿ ಮುಚ್ಚಿದ್ರೆ ಮರುದಿನ ಅದೇ ಸಾವಿರ ಗುಂಡಿ ಓಪನ್ ಆಗುತ್ತದೆ. ಇದು ಕಳ್ಳ ಪೊಲೀಸ್ ಆಟದ ರೀತಿ ಇದೆ ಎಂದರು.
ಬಿಜೆಪಿ ಸರ್ಕಾರ ಗುಂಡಿ ಮುಚ್ಚಿಲ್ಲ ಅಂತೀರಲ್ಲಾ, ಗುಂಡಿ ಮುಚ್ಚುವುದು ತಾತ್ಕಾಲಿಕ ಅಷ್ಟೇ, ಶಾಶ್ವತ ಅಲ್ಲ. ಇಡೀ ಕಾಂಗ್ರೆಸ್ ಸರ್ಕಾರ ಗುಂಡಿಗಳಲ್ಲಿ ಇದೆ. ರಸ್ತೆ ಗುಂಡಿಗಳು ಮರಣ ಕೂಪ ಆಗಿವೆ. ಬೆಂಗಳೂರು ಮಾತ್ರ ಅಲ್ಲ ಇಡೀ ರಾಜ್ಯದಲ್ಲಿ ಕೆಲಸ ಮಾಡಬೇಕಾಗಿದೆ ಎಂದು ಆರ್ ಅಶೋಕ್ ಕಿಡಿಕಾರಿದ್ರು.


