ಬೆಂಗಳೂರು:– ಬಿಜೆಪಿ ಶಾಸಕ ಮುನಿರತ್ನ ಮೇಲಿನ ಪ್ರಕರಣದ ತನಿಖೆಗೆ ಎಸ್‌ಐಟಿಗೆ ವಹಿಸಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ.
Advertisement
ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಸಾಲು ಸಾಲು ದೂರುಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಸಮಗ್ರ ತನಿಖೆಗಾಗಿ ಸಿಐಡಿಯ ವಿಶೇಷ ತನಿಖಾ ಸಂಸ್ಥೆ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ.
ಹಿರಿಯ ಐಪಿಎಸ್ ಅಧಿಕಾರಿ ಬಿ.ಕೆ ಸಿಂಗ್ ನೇತೃತ್ವದಲ್ಲಿ ತನಿಖೆಗೆ ಆದೇಶ ಮಾಡಿದೆ. ಮುನಿರತ್ನ ಪ್ರಕರಣವನ್ನು SIT ತನಿಖೆ ನಡೆಸಬೇಕು ಎಂದು ಒಕ್ಕಲಿಗ ಕಾಂಗ್ರೆಸ್ ಮುಖಂಡರು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಒಕ್ಕಲಿಗ ಕಾಂಗ್ರೆಸ್ ಜನಪ್ರತಿನಿಧಿಗಳ ಮನವಿ ಮೇರಿಗೆ SIT ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ.