ಗದಗ: ಬಸ್ ಚಕ್ರದಡಿ ಸಿಲುಕಿ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ಕೊಣ್ಣೂರಿನಲ್ಲಿ ನಡೆದಿದೆ. ರಾಘವೇಂದ್ರ (21) ಮೃತ ವಿದ್ಯಾರ್ಥಿಯಾಗಿದ್ದು, ರಾಮದುರ್ಗ ಹೊಸಪೇಟೆ ಬಸ್ ಏರಿ ಕೊಣ್ಣೂರಿನಿಂದ ನರಗುಂದ ಕಾಲೇಜಿಗೆ ಹೊರಟ್ಟಿದ್ದನು.
Advertisement
ಬಸ್ ಫುಲ್ ಇದ್ದ ಕಾರಣ ಫುಟ್ ಬೋರ್ಡ್ ನಲ್ಲಿ ವಿದ್ಯಾರ್ಥಿ ನಿಂತಿದ್ದನು. ಬಸ್ ನಿಲ್ದಾಣದ ಬಳಿಯ ರಸ್ತೆ ಗುಂಡಿಗೆ ಬಸ್ ಇಳಿಯುತ್ತಿದ್ದಂತೆ ಕೆಳಗೆ ಬಿದ್ದಿದ್ದಾನೆ. ಕೆಳಗೆ ಬಿದ್ದ ಪರಿಣಾಮ ರಾಘವೇಂದ್ರ ತಲೆ ಮೇಲೆ ಬಸ್ ಹಿಂಬದಿ ಚಕ್ರ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇನ್ನೂ ಸ್ಥಳಕ್ಕೆ ಭೇಟಿ ನೀಡಿದ ನರಗುಂದ ಪೊಲೀಸರಿಂದ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.