ರೇಣುಕಾಸ್ವಾಮಿ ಕೊಲೆ ಕೇಸ್ನ ತನಿಖೆ ಮುಕ್ತಾಯ ಆಗಿದೆ. ದರ್ಶನ್, ಪವಿತ್ರಾ ಗೌಡ, ಪ್ರದೋಶ್, ಪವನ್ ಸೇರಿದಂತೆ ಹಲವರ ಮೇಲೆ ಗಂಭೀರ ಆರೋಪಗಳು ಎದುರಾಗಿವೆ. ಅದಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ತೀವ್ರ ತನಿಖೆ ಮಾಡಿದ್ದಾರೆ. ತನಿಖೆ ಅಂತ್ಯವಾಗಿದ್ದು, ಇತ್ತೀಚೆಗೆ ಚಾರ್ಜ್ಶೀಟ್ ಸಲ್ಲಿಸಲಾಗಿದೆ. ಆ ಬಳಿಕ ಜಾಮೀನು ಪಡೆಯುಲು ಆರೋಪಿಗಳು ಅರ್ಜಿ ಸಲ್ಲಿಸಿದರು. ಆರೋಪಿಗಳಾದ ಕೇಶವಮೂರ್ತಿ, ಕಾರ್ತಿಕ್ ಹಾಗೂ ನಿಖಿಲ್ಗೆ ಈ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಲಾಗಿದೆ.
ಆರೋಪಿಗಳಿಗೆ ಸೆಪ್ಟೆಂಬರ್ 23 ರಂದು ಜಾಮೀನು ಸಿಕ್ಕರೂ ಜೈಲಿನಿಂದ ಇನ್ನು ಬಿಡುಗಡೆ ಆಗಿರಲಿಲ್ಲ. ಇದಕ್ಕೆ ಮೂಲ ಕಾರಣ ನ್ಯಾಯಾಲಯದ ಆದೇಶ ಪ್ರತಿಯು ತುಮಕೂರು ಕಾರಾಗೃಹದ ಜೈಲು ಅಧಿಕಾರಿಗಳನ್ನ ತಲುಪಿಲ್ಲ. ಹೀಗಾಗಿ ಮೂವರು ಇನ್ನು ಜೈಲಿನಲ್ಲೇ ಇದ್ದಾರೆ.
ಮೂವರು ಆರೋಪಿಗಳು ಇಂದು ಜೈಲಿನಿಂದ ಬಿಡುಗಡೆ ಆಗುವುದು ಬಹುತೇಕ ಅನುಮಾನವಾಗಿದೆ. ಹೀಗಾಗಿ ಎಲ್ಲ ಪ್ರಕ್ರಿಯೆ ಮುಗಿಸಿ ಬಿಡುಗಡೆ ಆಗಬೇಕಿದೆ. ಸದ್ಯ ನಾಲ್ವರು ಆರೋಪಿಗಳ ಪೈಕಿ ಮೂವರಿಗೆ ಮಾತ್ರ ಜಾಮೀನು ನೀಡಲಾಗಿದೆ. ಎ16 ಆರೋಪಿ ಕೇಶವಮೂರ್ತಿಗೆ ಹೈಕೋರ್ಟ್ನಿಂದ ಬೇಲ್ ಸಿಕ್ಕರೇ, ಎ15 ಆರೋಪಿ ಕಾರ್ತಿಕ್ ಹಾಗೂ ಎ17 ಆರೋಪಿ ನಿಖಿಲ್ಗೆ 57ನೇ ಸಿಸಿಹೆಚ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.