HomeGadag Newsಬಿಜೆಪಿ ಕಾರ್ಯಕರ್ತರ ಅವಾಚ್ಯ ಶಬ್ದ ಪ್ರಯೋಗ ಖಂಡನೀಯ

ಬಿಜೆಪಿ ಕಾರ್ಯಕರ್ತರ ಅವಾಚ್ಯ ಶಬ್ದ ಪ್ರಯೋಗ ಖಂಡನೀಯ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ನರೇಗಲ್ : ಇತ್ತೀಚೆಗೆ ಪಟ್ಟಣದಲ್ಲಿ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರು ರಾಜ್ಯದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳಿಗೆ ವೈಯಕ್ತಿಕವಾಗಿ ಅವಾಚ್ಯ ಶಬ್ದಗಳನ್ನು ಪ್ರಯೋಗ ಮಾಡಿದ್ದು ಖಂಡನೀಯ ಎಂದು ಕಾಂಗ್ರೆಸ್‌ನ ನರೇಗಲ್ಲ ಶಹರ ಘಟಕದ ಅಧ್ಯಕ್ಷ ಶಿವನಗೌಡ ಪಾಟೀಲ ಹೇಳಿದರು.

ಪಟ್ಟಣದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೋರಾಟ ಮಾಡಲು, ಪ್ರತಿಭಟನೆ ಮಾಡಲು ಎಲ್ಲರಿಗೂ ಹಕ್ಕಿದೆ. ಹಾಗೆಂದು ಯಾವ ಕಾರಣಕ್ಕೂ ಬಾಯಿ ಸಡಿಲು ಬಿಡಬಾರದು.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳವನ್ನು ವಿರೋಧಿಸಿ ಬಿಜೆಪಿ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿತು. ಆದರೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರನ್ನು ಏಕ ವಚನದಲ್ಲಿ ಸಂಬೋಧಿಸಿದ್ದಲ್ಲದೆ ಅವಾಚ್ಯ ಶಬ್ದಗಳ ಪ್ರಯೋಗ ಮಾಡಿದ್ದಾರೆ. ಇದನ್ನು ಕಾಂಗ್ರೆಸ್ ಘಟಕವು ತೀವ್ರವಾಗಿ ಖಂಡಿಸುತ್ತದೆ.

ಆ ಕಾರ್ಯಕರ್ತ ಬಹಿರಂಗ ಕ್ಷಮೆ ಕೇಳುವಂತೆ ಮಾಡಬೇಕು. ಆತನ ಮೇಲೆ ಸೂಕ್ತ ಕ್ರಮವನ್ನು ಜರುಗಿಸಿ, ತೆಗೆದುಕೊಂಡ ಕ್ರಮದ ಬಗ್ಗೆ ಸಾರ್ವಜನಿಕವಾಗಿ ವಿವರಗಳನ್ನು ತಿಳಿಸಬೇಕು. ಇಲ್ಲವಾದರೆ ಕಾಂಗ್ರೆಸ್ ಪಕ್ಷ ತೀವ್ರವಾದ ಪ್ರತಿಭಟನೆಯನ್ನು ಕೈಗೊಳ್ಳುಗುತ್ತದೆ ಎಂದು ಎಚ್ಚರಿಸಿದರು.

ಮುಖಂಡ ಮೈಲಾರಪ್ಪ ಚಳ್ಳಮರದ ಮಾತನಾಡಿ, ಕಳೆದ ಒಂದು ವರ್ಷದ ಹಿಂದೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರ ಬಡವರ ಮತ್ತು ಹಿಂದುಳಿದವರ ಏಳಿಗೆಗಾಗಿ ಅನೇಕ ಸೌಲಭ್ಯಗಳನ್ನು ನೀಡಿದೆ. ರಾಜ್ಯವು ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಬಿಜೆಪಿ ಅಭಿವೃದ್ಧಿಯ ಕಡೆಗೆ ಗಮನ ನೀಡದೆ ಇಂತಹ ಬಾಯಿ ಚಪಲದ ಮಾತುಗಳ ಮೂಲಕ ಅಧಿಕಾರದ ಗದ್ದುಗೆ ಹಿಡಿಯುವ ಕನಸನ್ನು ಕಂಡರೆ ಅದು ತಿರುಕನ ಕನಸಾಗುತ್ತದೆ. ಈ ರೀತಿಯ ಕೀಳುಮಟ್ಟದ ಮಾನಸಿಕತೆಯನ್ನು ತೋರಿಸಬಾರದು ಎಂದರು.

ಸುದ್ದಿಗೋಷ್ಠಿಯಲ್ಲಿ ರಾಚಯ್ಯ ಮಾಲಗಿತ್ತಿಮಠ, ಶೇಖರಗೌಡ ಪೊಲೀಸ್‌ಪಾಟೀಲ, ಅಲ್ಲಾಭಕ್ಷಿ ನದಾಫ್, ಶೇಕಪ್ಪ ಕೆಂಗಾರ, ಕೃಷ್ಣಪ್ಪ ಜುಟ್ಲ, ಶೇಕಪ್ಪ ಜುಟ್ಲ ಮುಂತಾದವರು ಪಾಲ್ಗೊಂಡಿದ್ದರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!