ಕುಟುಂಬಗಳ ಕಣ್ಣೊರೆಸುವ ಕಾರ್ಯ

0
Spread the love

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ವತಿಯಿಂದ ನಿರಂತರವಾಗಿ ನಡೆಯುತ್ತಿರುವ ಮದ್ಯವರ್ಜನ ಶಿಬಿರಗಳಿಂದ ನೊಂದ ಕುಟುಂಬಗಳ ಕಣ್ಣೊರೆಸುವ ಕೆಲಸ ಆಗುತ್ತಿದೆ ಎಂದು ಸಂಸ್ಥೆಯ ಜಿಲ್ಲಾ ನಿರ್ದೆಶಕ ಯೋಗೀಶ್ ಎ ಹೇಳಿದರು.

Advertisement

ಅವರು ರವಿವಾರ ಶಿರಹಟ್ಟಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಶಿರಹಟ್ಟಿ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್, ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ವ್ಯಸನಮುಕ್ತಿ ಸಂಶೋಧನಾ ಕೇಂದ್ರ, ರಾಜ್ಯ ಮದ್ಯಪಾನ ಸಂಯಮ ಮಂಡಳಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ 1913ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಮಾಜದಲ್ಲಿ ಸ್ವಾಸ್ತ್ಯಯವನ್ನು ಕಾಪಾಡುವುದಕ್ಕಾಗಿ ಡಾ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಪ್ರತಿ ತಾಲೂಕಿನಲ್ಲಿಯೂ ಸಹ ಇಂತಹ ಶಿಬಿರಗಳು ನಡೆಯುತ್ತಿದ್ದು, ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಶಿಬಿರಾರ್ಥಿಗಳಿಗೆ ಹೇಳಿದರು.

ಶಾಸಕ ಡಾ. ಚಂದ್ರು ಲಮಾಣಿ ಕಾರ್ಯಕ್ರಮ ಉದ್ಘಾಟಿಸಿದರು. ಅಜ್ಜು ಪಾಟೀಲ, ಆನಂದಸ್ವಾಮಿ ಗಡ್ಡದ್ದೇವರಮಠ, ಗುರುನಾಥ ದಾನಪ್ಪನವರ, ಕೆ.ಎ. ಬಳಿಗೇರ, ಎಂ.ಕೆ. ಲಮಾಣಿ, ಮಹಾಂತೇಶ ದಶಮನಿ, ಫಕ್ಕೀರೇಶ ರಟ್ಟಿಹಳ್ಳಿ, ಹುಮಾಯೂನ್ ಮಾಗಡಿ, ಫಕ್ಕೀರೇಶ ಮ್ಯಾಟಣ್ಣವರ, ಪ್ರಕಾಶ ಮದ್ದಿನ, ರಾಜು ಕುಂಬಿ, ಪ್ರಕಾಶ ಭೋರಶೆಟ್ಟರ, ರಾಮಣ್ಣ ಕಂಬಳಿ, ಶ್ರೀನಿವಾಸ ಬಾರಬಾರ, ನಂದಾ ಪಲ್ಲೇದ, ನಾಗೇಶ ವೈ.ಎ, ಜಗದೀಶ ಬ್ಯಾಳಿ, ತಾಲೂಕಾ ಯೋಜನಾಧಿಕಾರಿ ಪುನೀತ ಓಲೇಕಾರ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here