ಪ್ರಸಾದ ನಿಲಯದ ಕಾರ್ಯ ಶ್ಲಾಘನೀಯ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಹಸಿದವರಿಗೆ ಅನ್ನ ನೀಡುವುದು ಎಲ್ಲ ಕಾರ್ಯಗಳಂತಲೂ ಹೆಚ್ಚು ಪುಣ್ಯದ ಕಾರ್ಯವಾಗಿದೆ. ಇದನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿರುವ ಶ್ರೀ ಅನ್ನಪೂರ್ಣೇಶ್ವರಿ ಪ್ರಸಾದ ನಿಲಯದ ಸೇವಾ ಕಾರ್ಯ ಶ್ಲಾಘನೀಯ ಎಂದು ಖ್ಯಾತ ಮನೋರೋಗ ಚಿಕಿತ್ಸಕ ಹಾಗೂ ಜ. ತೋಂಟದಾರ್ಯ ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯರಾದ ಡಾ. ಆನಂದ ಪಾಂಡುರಂಗಿ ಹೇಳಿದರು.

Advertisement

ಅವರು ನಗರದ ಮಹಾತ್ಮ ಗಾಂಧಿ ವೃತ್ತದ ಬಳಿಯ ಹಳೇ ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಶ್ರೀ ಅನ್ನಪೂರ್ಣೇಶ್ವರಿ ಪ್ರಸಾದ ನಿಲಯದಲ್ಲಿ ಪ್ರಸಾದ ವಿತರಿಸಿ ಮಾತನಾಡಿದರು.

ಇನ್ನೋರ್ವ ಅತಿಥಿ, ಕುಷ್ಟಗಿಯ ಮಾಜಿ ಶಾಸಕ ಕೆ. ಶರಣಪ್ಪನವರು ಸೇವೆಯ ಬಗ್ಗೆ ಅಭಿಮಾನ ವ್ಯಕ್ತ ಪಡಿಸಿದರು. ಈ ಸಂದರ್ಭದಲ್ಲಿ ಜ. ತೋಂಟದಾರ್ಯ ವಿದ್ಯಾಪೀಠದ ಆಡಳಿತಾಧಿಕಾರಿ ಎಸ್.ಎಸ್. ಪಟ್ಟಣಶೆಟ್ಟಿ, ಹಿರಿಯರಾದ ಎಸ್.ಎಸ್. ಕಳಸಾಪೂರ ಹಾಗೂ ಶ್ರೀ ಅನ್ನಪೂರ್ಣೇಶ್ವರಿ ಪ್ರಸಾದ ನಿಲಯದ ಗೌರವಾಧ್ಯಕ್ಷ ಎಸ್.ಎಸ್. ಕಳಸಾಪುರ ಮುಂತಾದವರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here