ಧಾರವಾಡ: ಕಿಡಿಗೇಡಿ ಯುವಕನೋರ್ವ ಅಪ್ರಾಪ್ತೆಯನ್ನು ಲಾಡ್ಜ್ ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಧಾರವಾಡದಲ್ಲಿ ಜರುಗಿದೆ.
Advertisement
ಲೈಂಗಿಕ ದೌರ್ಜನ್ಯ ನಡೆಸಿದ ಬಳಿಕ ಪಾಪಿ ವಿಡಿಯೋ ಮಾಡಿಕೊಂಡು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾನೆ. ಹಲವು ವಾಟ್ಸ್ಆ್ಯಪ್ ಗ್ರೂಪ್ಗೂ ಹಾಕಿದ್ದು, ಹಲವರು ಬೇರೆ ಗ್ರೂಪ್ಗೆ ಶೇರ್ ಮಾಡಿದ್ದಾರೆ.
ಸದ್ಯ ಖಚಿತ ಮಾಹಿತಿ ಮೇರೆಗೆ ಯುವಕನನ್ನು ಧಾರವಾಡ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜತೆಗೆ ಬೇರೆ ಬೇರೆ ಗ್ರೂಪ್ನಲ್ಲಿ ವಿಡಿಯೋ ಶೇರ್ ಮಾಡಿದ್ದ 9 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ. ಸದ್ಯ ದೌರ್ಜನ್ಯ ಎಸಗಿದ ಆರೋಪಿ ಮೇಲೆ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.