ಮೊನ್ನೆಯಷ್ಟೆ ಬಿಗ್ಬಾಸ್ ಸೀಸನ್ 11ರ ಸ್ಪರ್ಧಿ ಚೈತ್ರಾ ಕುಂದಾಪುರ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಉಡುಪಿ ಕಮಲಶಿಲೆಯ ಬ್ರಾಹ್ಮೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಚೈತ್ರಾ ಕುಂದಾಪುರ ಹಾಗೂ ಶ್ರೀಕಾಂತ್ ಕಶ್ಯಪ್ ಅವರ ಮದುವೆ ನೆರವೇರಿತ್ತು. ಇದೀಗ ಚೈತ್ರಾ ಕುಂದಾಪುರ ವಿರುದ್ಧ ಗಂಭೀರ ಆರೋಪವೊಂದು ಕೇಳಿ ಬಂದಿದೆ.
ಚೈತ್ರಾ ವಿರುದ್ಧ ತಂದೆ ಬಾಲಕೃಷ್ಣ ನಾಯ್ಕ್ ಹಲವು ಆರೋಪಗಳನ್ನು ಮಾಡಿದ್ದು, ಈ ಮದುವೆಯನ್ನು ನಾನು ಒಪ್ಪಲು ಸಾಧ್ಯವಿಲ್ಲ. ನನ್ನನ್ನು ಮದುವೆಗೂ ಆಹ್ವಾನಿಸಿಲ್ಲ. ಆಕೆ ನನ್ನನ್ನು ಕರೆದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಗಳು ಚೈತ್ರಾ ಮದುವೆ ಬಗ್ಗೆ ತಂದೆ ಮಾತನಾಡಿ, ಚೈತ್ರಾ ಮತ್ತು ಆಕೆಯ ಪತಿ ಇಬ್ಬರೂ ಕಳ್ಳರು. ನನ್ನ ಪತ್ನಿ ಕೂಡ ಚೈತ್ರಾಳ ಬೆಂಬಲಕ್ಕೆ ನಿಂತಿದ್ದಾಳೆ.
ಇವರೆಲ್ಲ ಹಣದ ಆಸೆಗಾಗಿ ಹೀಗೆ ಮಾಡುತ್ತಿದ್ದಾರೆ ಎಂದರು. ಉದ್ಯಮಿ ಗೋವಿಂದ ಬಾಬು ಪೂಜಾರಿ ಪ್ರಕರಣದಲ್ಲೂ ಇವರು ಹಣ ಹಂಚಿಕೊಂಡಿದ್ದಾರೆ. ಆಕೆ ಸೈನಿಕರಿಗೆ ಹಣ ಕೊಟ್ಟಿದ್ದೇನೆ ಎಂದು ಹೇಳಿಕೊಂಡಿದ್ದಾಳೆ. ಸ್ವಂತ ಹಣದಲ್ಲಿ ಕೊಟ್ಟಿದ್ದರೆ ಹೆಮ್ಮೆಯ ವಿಷಯವಾಗುತ್ತಿತ್ತು ಎಂದು ಬೇಸರ ವ್ಯಕ್ತಪಡಿಸಿದರು.
ನನಗೆ ನನ್ನ ದೊಡ್ಡ ಮಗಳು ಮಾತ್ರ ಆಸರೆ. ನನ್ನ ದೊಡ್ಡ ಮಗಳು ಗಾಯತ್ರಿ ನಿರಪರಾಧಿ. ನಾನು ಮತ್ತು ನನ್ನ ದೊಡ್ಡ ಮಗಳು ಮರ್ಯಾದೆಯಿಂದ ಬದುಕುತ್ತಿದ್ದೇವೆ. ಚೈತ್ರಾ ಬಿಗ್ ಬಾಸ್ ಮನೆಗೆ ಹೋಗುವಾಗಲೂ ನನಗೆ ಹೇಳಿಲ್ಲ. ನನ್ನ ಪತ್ನಿ ನನ್ನನ್ನು ಜಗಲಿಯಲ್ಲಿ ಬಿಟ್ಟು ಬೀಗ ಹಾಕಿ ಬಿಗ್ ಬಾಸ್‌ಗೆ ಹೋಗಿದ್ದಳು. ನಾನು ಕಟ್ಟಿದ ಮನೆಯಲ್ಲಿ ನಾನೇ ಅನಾಥನಾಗಿದ್ದೇನೆ ಎಂದು ಹೇಳಿದ್ದಾರೆ.
ಆಕೆಗೆ ಯಾರು ದೊಡ್ಡ ಸ್ಥಾನಮಾನ ಕೊಡಬೇಡಿ. ತಂದೆಯನ್ನು ದೂರವಿಟ್ಟವರು ಸಂಸ್ಕೃತಿಯ ಬಗ್ಗೆ ಮಾತನಾಡುವುದು ಎಷ್ಟು ಸರಿ? ಆಕೆ ಸೈನಿಕರಿಗೆ ಹಣ ಕೊಟ್ಟಿದ್ದೇನೆ ಎಂದು ಹೇಳಿಕೊಂಡಿದ್ದಾಳೆ. ಸ್ವಂತ ಹಣದಲ್ಲಿ ಕೊಟ್ಟಿದ್ದರೆ ಹೆಮ್ಮೆಯ ವಿಷಯ. ಮೋಸದ ಹಣದಲ್ಲಿ ಆಕೆ ಕೊಟ್ಟು ಪ್ರಯೋಜನ ಏನು? ಆಕೆಯ ಮದುವೆಯನ್ನು ನಾನು ಒಪ್ಪುವುದಿಲ್ಲ. ನನಗೆ ಸರಿಯಾಗಿ ಮದುವೆಗೆ ಆಮಂತ್ರಣ ಕೂಡ ನೀಡಿಲ್ಲ. ಚೈತ್ರ ಮದುವೆ ಸಂದರ್ಭ ನನ್ನಲ್ಲಿ ಹಣ ಕೇಳಿದಳು. ನಾನು ಹೋಟೆಲ್‌ನಲ್ಲಿ ಕೆಲಸ ಮಾಡುವ ಸಾಮಾನ್ಯ ನೌಕರ ಎಂದಿದ್ದಾರೆ.
ಚೈತ್ರ ಮತ್ತು ಆಕೆಯ ತಾಯಿ ಹಣಕ್ಕಾಗಿ ನನ್ನನ್ನು ದೂರವಿಟ್ಟಿದ್ದಾರೆ. ಚೈತ್ರಾ ಪತಿ ನಮ್ಮ ಮನೆಯಲ್ಲಿ ಇದ್ದವ, ಅವನು ಕೂಡ ಕಳ್ಳ. ನನ್ನ ಕುಟುಂಬದ ಮಾನ ಮರ್ಯಾದೆ ತೆಗೆದಿದ್ದಾರೆ. ನಾನು ಸತ್ಯ, ನ್ಯಾಯ, ಧರ್ಮದಲ್ಲಿರುವ ವ್ಯಕ್ತಿ. ನನ್ನ ದೊಡ್ಡ ಮಗಳು ಟೀಚರ್ ಆಗಿ, ಹೊಲಿಗೆ ಮಾಡಿಕೊಂಡು ಗೌರವಾನ್ವಿತ ರೀತಿಯಲ್ಲಿ ಬದುಕುತ್ತಿದ್ದಾಳೆ. ನನ್ನ ದೊಡ್ಡ ಮಗಳ ಮೇಲು ಚೈತ್ರ ಸುಳ್ಳು ಅಪವಾದ ಹಾಕಿದ್ದಳು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.