ಕರ್ನಾಟಕದಲ್ಲಿ 40,009 ನಕಲಿ ಮತದಾರರ ವಿಳಾಸಗಳಿವೆ: ರಾಹುಲ್ ಗಾಂಧಿ ಆರೋಪ

0
Spread the love

ನವದೆಹಲಿ: ಚುನಾವಣಾ ಆಯೋಗವು ಮತಗಳನ್ನು ಕದಿಯಲು ಬಿಜೆಪಿಯೊಂದಿಗೆ ಕೈಜೋಡಿಸಿದೆ ಎಂದು ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ,

Advertisement

ಚುನಾವಣಾ ಆಯೋಗವು ಮತಗಳನ್ನು ಕದಿಯಲು ಬಿಜೆಪಿಯೊಂದಿಗೆ ಕೈಜೋಡಿಸಿದೆ. ಮತದಾರರ ಪಟ್ಟಿಗಳಿಗೆ ನಕಲಿ ಜನರನ್ನು ಸೇರಿಸಲಾಗುತ್ತಿದೆ ಎಂದಿದ್ದಾರೆ. ಕರ್ನಾಟಕ ಮತದಾರರ ಪಟ್ಟಿಯನ್ನು ತೋರಿಸುವ ಮೂಲಕ ಅವರು ತಮ್ಮ ಆರೋಪಕ್ಕೆ ಸಾಕ್ಷಿ ಒದಗಿಸಿದ್ದಾರೆ.

ಮಹದೇವಪುರದಲ್ಲಿ ನಕಲಿ ವಿಳಾಸಗಳನ್ನು ಹೊಂದಿರುವ ‘40,009’ ಮತದಾರರಿದ್ದಾರೆ. ‘ಮನೆ ಸಂಖ್ಯೆ 0’ ಎಂಬ ಅಡ್ರೆಸ್ ಇರುವ ಹಲವರು ನೋಂದಾಯಿಸಿಕೊಂಡಿದ್ದಾರೆ. ಒಂದು ಪ್ರಕರಣದಲ್ಲಿ, 46 ಮತದಾರರು ಒಂದೇ ರೂಮಿನ ವಿಳಾಸದ ಅಡಿಯಲ್ಲಿ ನೋಂದಾಯಿಸಲ್ಪಟ್ಟಿದ್ದಾರೆ.

ಆದರೆ ಸ್ಥಳಕ್ಕೆ ಭೇಟಿ ನೀಡಿದಾಗ, ಯಾರೂ ಅಲ್ಲಿ ವಾಸಿಸುತ್ತಿಲ್ಲ ಎಂದು ಗೊತ್ತಾಯಿತು ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನಕಲಿ ವಿಳಾಸಗಳೊಂದಿಗೆ 40,000 ನಮೂದುಗಳು ಮತ್ತು ಯಾವುದೇ ಫೋಟೋಗಳಿಲ್ಲದ ಸುಮಾರು 4,000 ನೋಂದಾಯಿತ ಮತದಾರರಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here