ಲೋಕಾಯುಕ್ತದಲ್ಲಿ ಸಿದ್ದರಾಮಯ್ಯ ವಿರುದ್ಧ 61 ಕೇಸ್ʼಗಳು ಇವೆಯಂತೆ: ಹೆಚ್ ಡಿ ಕುಮಾರಸ್ವಾಮಿ

0
Spread the love

ಬೆಂಗಳೂರು: ಲೋಕಾಯುಕ್ತದಲ್ಲಿ ಸಿದ್ದರಾಮಯ್ಯ ವಿರುದ್ಧ 61 ಕೇಸ್ಗಳು ಇವೆಯಂತೆ. ತನಿಖೆಯಾಗದೆ 50 ಕೇಸ್ ಬಾಕಿ ಉಳಿದಿವೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದರು.

Advertisement

ನಗರದಲ್ಲಿ ಮಾತನಾಡಿದ ಅವರು, ಲೋಕಾಯುಕ್ತದಲ್ಲಿ ಸಿದ್ದರಾಮಯ್ಯ ವಿರುದ್ಧ 61 ಕೇಸ್ ಗಳು ಇವೆಯಂತೆ. ತನಿಖೆಯಾಗದೆ 50 ಕೇಸ್ ಬಾಕಿ ಉಳಿದಿವೆ. ಅವರು ನನ್ನದು ತೆರೆದ ಪುಸ್ತಕ, ಹಿಂದುಳಿದ ನಾಯಕ ಎಂದಿದ್ದಾರೆ. ಸರ್ಕಾರ ಬೀಳಿಸುವುದಕ್ಕೆ ಪ್ಲ್ಯಾನ್ ಮಾಡುತ್ತಿದ್ದಾರೆಂದು ಆರೋಪಿಸಿದ್ದಾರೆ. ಅವರು ಸರಿ ಇದ್ದಿದ್ದರೆ ವಿರೋಧ ಪಕ್ಷದವರು ಏನು ಮಾಡುತ್ತಾರೆ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

2017ರಲ್ಲಿ ನನಗೆ ಎಸ್ಐಟಿ ಅಧಿಕಾರಿಗಳು ನೋಟಿಸ್ ಕೊಟ್ಟರು. 2018ರಲ್ಲಿ ನಾನು ಮನಸ್ಸು ಮಾಡಿದ್ರೆ ಕೇಸ್ ಮುಚ್ಚಿ ಹಾಕಿಸಬಹುದಿತ್ತು. ಒಬ್ಬ ಅಧಿಕಾರಿಯ ಮೂಲಕ ಹೆಚ್ಡಿಕೆ ಬಂಧಿಸಬೇಕೆಂದು ಪ್ಲ್ಯಾನ್ ನಡೆದಿದೆ.

ವಕೀಲರ ಸೂಚನೆಯಂತೆ ಜಾಮೀನು ಪಡೆದುಕೊಂಡು ಹೋದೆ. ಇದಕ್ಕೇಕೆ ಜಾಮೀನು ಪಡೆದ್ರಿ ಎಂದು ಅಧಿಕಾರಿಗಳು ಹೇಳಿದ್ದರು. 3 ತಿಂಗಳಲ್ಲಿ ತನಿಖೆ ಮುಗಿಸಿ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. 2018ರಲ್ಲಿ ಎಸ್ಐಟಿ ಅಧಿಕಾರಿಗಳು ರಿಪೋರ್ಟ್ ಸಲ್ಲಿಸಿದ್ದಾರೆ. ಇಷ್ಟಾದ್ರೂ ಕಾಂಗ್ರೆಸ್ಸಿಗರ ಜತೆ ಸೇರಿ ಸರ್ಕಾರ ಮಾಡಬೇಕಾಯ್ತು ಎಂದರು.


Spread the love

LEAVE A REPLY

Please enter your comment!
Please enter your name here