ಶಾಸಕ ಯತ್ನಾಳ್ ಉಚ್ಛಾಟನೆ ಹಿಂದೆ ಕಾಣದ ಕೈಗಳಿವೆ: ಜಯಮೃತ್ಯುಂಜಯ ಶ್ರೀ

0
Spread the love

ಧಾರವಾಡ: ಬಿಜೆಪಿ ಶಾಸಕ ಯತ್ನಾಳ್ ಉಚ್ಛಾಟನೆ ಹಿಂದೆ ಕಾಣದ ಕೈಗಳಿವೆ ಎಂದು ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

Advertisement

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ ಎಂದಿಗೂ ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ. ಕಾಣದ ಕೈಗಳು ಅವರನ್ನು ಉಚ್ಛಾಟನೆ ಮಾಡುವಂತೆ ಮಾಡಿವೆ. ಬಿಜೆಪಿ ಪಕ್ಷದ ವರಿಷ್ಠರು ಯತ್ನಾಳ ಅವರ ಉಚ್ಛಾಟನೆ ಆದೇಶವನ್ನು ವಾಪಸ್ ಪಡೆಯದೇ ಹೋದರೆ ಲಿಂಗಾಯತ ಸಮುದಾಯದ ಎಲ್ಲ ಶಾಸಕರು ಬಿಜೆಪಿ ಬಿಟ್ಟು ಹೊರಬರಬೇಕು ಎಂದು ತಿಳಿಸಿದರು.

ಮೋದಿ ಹಾಗೂ ಅಮಿತ್ ಶಾ ಅವರಿಗೆ ಗೊತ್ತಿರದೇ ಇರುವ ಅಂಶಗಳು ಇಲ್ಲಿವೆ. ಇದರಿಂದ ಯಾರೂ ಧೃತಿಗೆಡಬಾರದು. ನಮ್ಮ ಸಮಾಜಕ್ಕೆ ನಾನು ಕರೆ ಕೊಡುತ್ತೇನೆ. ಬೆಳಗಾವಿಯಲ್ಲಿ ಗುರುವಾರಸಭೆ ಕರೆಯುತ್ತೇನೆ. ಮುಂದೆ ಒಂದು ದಿನ ರಾಜ್ಯದಾದ್ಯಂತ ಪ್ರತಿಭಟನೆ ಮಾಡುತ್ತೇವೆ. ಇದು ಪ್ರಧಾನಿ ವಿರುದ್ಧದ ಹೋರಾಟ ಅಲ್ಲ. ಯಾರು ಅಟ್ಟಹಾಸ ಮೆರೆದಿದ್ದಾರೋ ಅವರ ವಿರುದ್ಧ ಹೋರಾಟ. ಬಿಜೆಪಿ ಹೈಕಮಾಂಡ್ ಕೂಡಲೇ ಈ ಆದೇಶ ವಾಪಸ್‌ ಪಡೆದು ಆದ ತಪ್ಪನ್ನು ಸರಿಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಬೆಳಗಾವಿಯ ಗಾಂಧಿ ಭವನದಲ್ಲಿ ಗುರುವಾರ ಎಲ್ಲ ಪದಾಧಿಕಾರಿಗಳ ಯುವ ಘಟಕ, ರೈತ ಘಟಕದ ಸಭೆ ಕರೆಯುತ್ತೇನೆ. ಯತ್ನಾಳ ಉಚ್ಚಾಟನೆ ಹಿಂದೆ ದುಷ್ಟ ಶಕ್ತಿಗಳ ಕೈವಾಡ ಇದೆ. ವೀರೇಂದ್ರ ಪಾಟೀಲ, ಜೆ.ಎಚ್‌.ಪಟೇಲರಂತೆ ಯತ್ನಾಳರಿಗೂ ಮಾಡುತ್ತಿದ್ದಾರೆ. ಹೈಕಮಾಂಡ್ ನಮಗೆ ಕುಟುಂಬ ರಾಜಕಾರಣ ಬೇಕು ಎಂಬುದಾಗಿ ನೇರವಾಗಿ ಹೇಳಲಿ ಎಂದ ಸ್ವಾಮೀಜಿ, ಈ ಬಗ್ಗೆ ಎಲ್ಲವನ್ನೂ ಸಭೆಯಲ್ಲಿ ನಿರ್ಧಾರ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಕುಟುಂಬ ರಾಜಕಾರಣ ಬೇಡ ಎನ್ನುವುದು ತಪ್ಪೇ? ಯತ್ನಾಳ ಏನೇ ಮಾತನಾಡಿದರೂ ಅವರು ಉತ್ತರ ಕರ್ನಾಟಕ, ಹಿಂದೂತ್ವದ ಬಗ್ಗೆಯೇ ಮಾತನಾಡಿದ್ದಾರೆ. ಯತ್ನಾಳ ಅವರನ್ನು ಉಚ್ಛಾಟನೆ ಮಾಡಿ ಬಿಜೆಪಿ ತನ್ನ ಕಾಲ ಮೇಲೆ ತಾನೇ ಕಲ್ಲು ಹಾಕಿಕೊಂಡಿದ್ದು, ಇದು ಪಕ್ಷಕ್ಕೆ ಹಿನ್ನಡೆ. ಈಗ ಬಿಜೆಪಿ ೬೦ ಸ್ಥಾನ ಬಂದಿದ್ದು, ಮುಂದೆ ೩೦ ಸ್ಥಾನ ಕೂಡ ಬರೋದಿಲ್ಲ ಎಂದು ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here