ಬೆಂಗಳೂರು: ಹಿಂದುಳಿದ ವರ್ಗದ ಪ್ರಭಾವಿಯಾಗಿರುವ ಸಿದ್ದರಾಮಯ್ಯನವರ ವರ್ಚಸ್ಸು ಕುಗ್ಗಿಸಲು ಸಂಚು ನಡೆದಿದೆ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಹೇಳಿದರು. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇದು 20 ವರ್ಷಗಳ ಹಳೆಯ ಕೇಸು. ಈಗ್ಯಾಕೆ ತೆಗೆದರು?.
ಅವರು ಪ್ರಾಸಿಕ್ಯೂಷನ್ಗೆ ಕೇಳ್ತಾರೆ ಅಂತ ಸಿದ್ದರಾಮಯ್ಯ ಅವರಿಗೆ ನೊಟೀಸ್ ಯಾಕೆ ಕೊಟ್ರು?. ಹಿಂದುಳಿದ ವರ್ಗದ ಪ್ರಭಾವಿಯಾಗಿರುವ ಸಿದ್ದರಾಮಯ್ಯನವರ ವರ್ಚಸ್ಸು ಕುಗ್ಗಿಸಲು ಸಂಚು ನಡೆದಿದೆ ಎಂದರು.
ರಾಜ್ಯಪಾಲರು ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆಂದು ಜನರೇ ಮಾತನಾಡಿಕೊಳ್ಳುತ್ತಿದ್ದಾರೆ. ರಾಜ್ಯಪಾಲರು ಅನುಭವಿಗಳು. ಕೇಂದ್ರದಲ್ಲಿ ಅನೇಕ ವರ್ಷಗಳ ಕಾಲ ಮಂತ್ರಿಯಾಗಿ ಕೆಲಸ ಮಾಡಿದವರು. ನಾನು ಅವರನ್ನು ಹತ್ತಿರದಿಂದ ನೋಡಿದ್ದೇನೆ. ಹಾಗಾಗಿ ಪ್ರಾಸಿಕ್ಯೂಷನ್ಗೆ ಅನುಮತಿ ಕೊಡಲ್ಲ ಅನ್ನುವ ವಿಶ್ವಾಸ ಇದೆ ಎಂದು ಹೇಳಿದರು.



