ನಾಯಿಗಳ ರಕ್ಷಣೆಗೆ ಶೆಡ್ ನಿರ್ಮಾಣ ಮಾಡೋ ಪ್ಲ್ಯಾನ್ ಇದೆ: ಯುಟಿ ಖಾದರ್!

0
Spread the love

ಬೆಂಗಳೂರು:– ನಾಯಿಗಳ ರಕ್ಷಣೆಗೆ ಶೆಡ್ ನಿರ್ಮಾಣ ಮಾಡೋ ಪ್ಲ್ಯಾನ್ ಇದೆ ಎಂದು ಸ್ಪೀಕರ್ ಯುಟಿ ಖಾದರ್ ಹೇಳಿದ್ದಾರೆ.

Advertisement

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ವಿಧಾನಸೌಧದಲ್ಲಿರೋ ನಾಯಿಗಳ ರಕ್ಷಣೆ ಸಂಬಂಧ ಸರ್ಕಾರಕ್ಕೆ ವಿವರವಾದ ಮಾಹಿತಿ ಜೊತೆಗೆ ಪ್ರಸ್ತಾವನೆ ಕಳಿಸಿದ್ದೇವೆ. ಸರ್ಕಾರ ನಮಗೆ ಅನುಮತಿ ಕೊಟ್ಟರೆ ನಾಯಿಗಳಿಗೆ ಪ್ರತ್ಯೇಕ ನಿರ್ವಹಣೆ ಮಾಡೋ ಬಗ್ಗೆ ತೀರ್ಮಾನ ಮಾಡ್ತೀವಿ. ವಿಧಾನಸೌಧದಲ್ಲಿ 53 ನಾಯಿಗಳು ಇವೆ. ನಾಯಿಗಳು ವಿಧಾನಸೌಧದ ಒಳಗೆ ಬಾರದಂತೆ ತಡೆಯಲು ಗೇಟ್ ವ್ಯವಸ್ಥೆ ಇಲ್ಲ. ಶಾಸಕರು ವಾಕಿಂಗ್ ಮಾಡಬೇಕಾದ್ರೆ, ಜನರು ವಿಸಿಟ್ ಮಾಡಿದಾಗ ತೊಂದರೆ ಆಗ್ತಿದೆ. ಹೀಗಾಗಿ ನಾವು ಅವುಗಳ ರಕ್ಷಣೆಗೆ ಶೆಡ್ ನಿರ್ಮಾಣ ಮಾಡೋ ಪ್ಲ್ಯಾನ್ ಇದೆ ಎಂದಿದ್ದಾರೆ.

ಖಾಸಗಿ ಎಸ್‌ಜಿಒಗೆ ಕೊಟ್ಟು ಇವುಗಳಲ್ಲಿ ಸಾಕುವ ವ್ಯವಸ್ಥೆ ಮಾಡುವ ತೀರ್ಮಾನವಾಗಿ ಚರ್ಚೆ ಆಗಿವೆ.ನಾಯಿಗಳ ರಕ್ಷಣೆಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನ ಸರ್ಕಾರಕ್ಕೆ ರವಾನೆ ಮಾಡಿದ್ದೇವೆ. ಸರ್ಕಾರ ಅದಕ್ಕೆ ಒಪ್ಪಿಗೆ ಕೊಟ್ಟರೆ ಅನುಷ್ಟಾನ ಮಾಡ್ತೇವೆ ಎಂದು ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here