ಕಲಬುರಗಿ: ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರ ತೆಗೆಯಲು ಪ್ಲ್ಯಾನ್ ನಡೆದಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಜೆಪಿಯ ಕೇಂದ್ರ ನಾಯಕರ ವಿರುದ್ಧ ಆರೋಪಿಸಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರ ತೆಗೆಯಲು ಪ್ಲ್ಯಾನ್ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ನಿಮ್ಮ ಸರ್ಕಾರವನ್ನು ಬೀಳಿಸುತ್ತಾರೆ ಎಂದು ಹೇಳಿದ್ದಾರೆ.
ನಿಮ್ಮಲ್ಲಿ ಏನೇ ಮನಸ್ತಾಪ ಇದ್ದರೂ ಒಗ್ಗಟ್ಟಾಗಿರಬೇಕು. ನೀವು ಹುಷಾರಾಗಿರಬೇಕು ಎಂದು ವೇದಿಕೆ ಮೇಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.



