ರಾಮನಗರ: ಸಿಎಂ ಸಿದ್ದರಾಮಯ್ಯರದ್ದೂ ಹನಿಟ್ರ‍್ಯಾಪ್ ಆಗಿರುವ ಅನುಮಾನ ಇದೆ ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರೇ ಕಾಂಗ್ರೆಸ್‌ನವರ ಹನಿಟ್ರ‍್ಯಾಪ್ ಮಾಡುತ್ತಿದ್ದಾರೆ. ತಮ್ಮ ವಿರುದ್ಧ ಮಾತನಾಡುವವರ ವಿರುದ್ಧ ಹನಿಟ್ರ‍್ಯಾಪ್ ಮಾಡುವ ಕೆಲಸ ಆಗುತ್ತಿದೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾತೇ ಆಡುತ್ತಿಲ್ಲ. ತನಿಖೆ ಮಾಡುತ್ತೇವೆ ಅನ್ನೋದು ಬಿಟ್ಟರೆ ಇನ್ನೇನು ಹೇಳಿಲ್ಲ. ಸಿಎಂ ಸಿದ್ದರಾಮಯ್ಯರದ್ದೂ ಹನಿಟ್ರ‍್ಯಾಪ್ ಆಗಿರುವ ಅನುಮಾನ ಇದೆ. ತನಿಖೆ ಆದರೆ ಇವರದ್ದೂ ಎಲ್ಲಿ ಆಚೆ ಬರುತ್ತೋ ಎಂಬ ಭಯ. ಅದಕ್ಕಾಗಿ ಸಿಎಂ ಈ ಬಗ್ಗೆ ತನಿಖೆಗೆ ಸೂಚಿಸುತ್ತಿಲ್ಲ ಎಂದು ಆರೋಪಿಸಿದರು.
ದಲಿತರ ಹಣವನ್ನ ಸರ್ಕಾರ ತಿಂದು ಹಾಕುತ್ತಿದೆ. ದಲಿತರಿಗೆ ಸರ್ಕಾರ ಅನ್ಯಾಯ ಮಾಡುತ್ತಿದ್ದರೂ ಕಾಂಗ್ರೆಸ್ ದಲಿತ ಸಚಿವರು, ಶಾಸಕರು ಬಾಯಿ ಬಿಡುತ್ತಿಲ್ಲ. ಇಂತಹ ಗುಲಾಮಗಿರಿಯನ್ನ ನಾನು ಎಲ್ಲಿಯೂ ನೋಡಿಲ್ಲ. ದಲಿತರ ಹಣ, ದಲಿತರಿಗೆ ಮೀಸಲಾಗಿ ಇಡಬೇಕು. ಗ್ಯಾರಂಟಿಗಾಗಿ ದಲಿತರ ಹಣ ಬಳಸಿಕೊಳ್ಳಲಾಗಿದೆ ಎಂದು ಆರೋಪಿಸಿದರು.