ಚಿತ್ರದುರ್ಗ:- ಇಲ್ಲಿನ ಸಿರಿಗೆರೆ ಶ್ರೀಗಳ ಪೀಠ ತ್ಯಾಗಕ್ಕೆ ಭಕ್ತರಿಂದಲೇ ಒತ್ತಾಯ ಕೇಳಿ ಬಂದಿದೆ.ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿಗಳಿಂದ ರೂಪಿತವಾದ ನಿಯಮಗಳ ಪ್ರಕಾರ 60 ವರ್ಷದ ನಂತರ ಪೀಠ ತ್ಯಾಗ ಮಾಡಿ ಉತ್ತರಾಧಿಕಾರಿ ನೇಮಿಸಬೇಕು. ಆದರೆ, ಡಾ. ಶಿವಮೂರ್ತಿ ಶ್ರೀಗಳಿಗೆ 78 ವರ್ಷ ವಯಸ್ಸಾಗಿದೆ. ಹಿರಿಯ ಗುರುಗಳ ನಿಯಮ ಪಾಲನೆಯಾಗಿಲ್ಲ ಎಂಬುವುದು ಭಕ್ತರ ಅಸಮಾಧನಕ್ಕೆ ಕಾರಣವಾಗಿದೆ.
ಹೀಗಾಗಿ ಭಕ್ತರು ಶ್ರೀಗಳ ಪೀಠ ತ್ಯಾಗಕ್ಕೆ ಒತ್ತಾಯಿಸಿದ್ದಾರೆ. ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರು ಪೀಠ ತ್ಯಾಗ ಮಾಡಿ, ಉತ್ತರಾಧಿಕರಿಯನ್ನು ನೇಮಕ ಮಾಡುವ ವಿಚಾರ ಸದ್ಯ ಚರ್ಚೆಯಲ್ಲಿದೆ. ಶ್ರೀಗಳ ಪೀಠತ್ಯಾಗ, ಉತ್ತರಾಧಿಕಾರಿ ನೇಮಕ ಮತ್ತು ಹಿರಿಯ ಗುರುಗಳ ಅವಧಿಯಲ್ಲಿ ರೂಪಿತವಾದ ಬೈಲಾ ಯಥಾವತ್ತಾಗಿ ಜಾರಿಗೊಳಿಸಬೇಕೆಂದು ರವಿವಾರ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ, ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆಯಲ್ಲಿ ಸಾದರ ಲಿಂಗಾಯತ ಸಮಾಜದ ಮುಖಂಡರ ಸಭೆ ನಡೆಯಿತು.
ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರು ನಿವೃತ್ತಿ ಘೋಷಿಸಿ ಉತ್ತರಾಧಿಕಾರಿ ಘೋಷಣೆ ಮಾಡಬೇಕು. ಶ್ರೀಮಠದ ಏಕವ್ಯಕ್ತಿ ಡೀಡ್ ರದ್ದುಪಡಿಸಿ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿಗಳ ಮೂಲ ಬೈಲಾ ಯಥಾವತ್ತಾಗಿ ಜಾರಿಗೊಳಿಸಬೇಕು ಎಂದು ಸಾದರ ಲಿಂಗಾಯತ ಸಮಾಜ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.